ಬೆಂಗಳೂರು: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ತಮ್ಮ ರಾಜಿನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ಇಂದು ನಾನು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡುತ್ತಿರುವುದಾಗಿ ಹೇಳಿದ್ದು ತಮ್ಮ ರಾಜಿನಾಮೆ ಪತ್ರವನ್ನು ಅಧ್ಯಕ್ಷರಿಗೆ ರವಾನಿಸುತ್ತಿದ್ದೇನೆ. ರಾಜ್ಯದಲ್ಲಿ ಸುಭದ್ರ ಸರ್ಕಾರ ತರುವ ನಿಟ್ಟಿನಲ್ಲಿ ತಾವು ರಾಜಿನಾಮೆ ನೀಡುತ್ತಿದ್ದೇನೆ. ಪಕ್ಷ ಬದಲಾವಣೆಯಾದರೆ ವ್ಯಕ್ತಿತ್ವ ಬದಲಾವಣೆಯಾಗಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಯನ್ನು ಸೇರುತ್ತಿರುವುದಾಗಿ ಘೋಷಿಸಿರುವ ಕುಮಾರ್ ಬಂಗಾರಪ್ಪ, ನನ್ನ ಬೆಂಬಲಿಗರು, ಅಭಿಮಾನಿಗಳ ಅಭಿಪ್ರಾಯದಂತೆ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದು ಬಿಜೆಪಿ ಪಕ್ಷ ಸೇರುತ್ತಿದ್ದೇನೆ ಎಂದರು.
ಇದೇ ವೇಳೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರ್ ಬಂಗಾರಪ್ಪ, ಕಾಗೋಡು ತಿಪ್ಪಮ್ಮ ಅವರು ನನ್ನ ವಿರುದ್ಧ ರಾಜಕೀಯ ದ್ವೇಷ ಮುಂದುವರೆಸಿದ್ದಾರೆ. ಹಲವು ವರ್ಷಗಳು ಕಳೆದರೂ ನಾಯಕತ್ವ ವಿಚಾರದಲ್ಲಿ ಅವರು ವೈರತ್ವವನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದ್ದಾರೆ.