ರಮೇಶ್ ಮತ್ತು ಸತೀಶ್ ಜಾರಕಿ ಹೊಳಿ 
ರಾಜಕೀಯ

ಸಚಿವ ರಮೇಶ್ ಜಾರಕಿಹೊಳಿ ಅಪ್ರಬುದ್ಧ ರಾಜಕಾರಣಿ: ಸಹೋದರ ಸತೀಶ್ ಜಾರಕಿಹೊಳಿ ತಿರುಗೇಟು

ರಾಜಕೀಯ ಸ್ಥಿತಿಗತಿಗಳನ್ನು ನಿರ್ವಹಿಸಲು ಸಚಿವ ರಮೇಶ್ ಜಾರಕಿಹೊಳಿ ಇನ್ನೂ ಅಪ್ರಬುದ್ಧರಾಗಿದ್ದಾರೆ, ಕಲಿಯುವುದು ಬಹಳಷ್ಟಿದೆ ಎಂದು ಮಾಜಿ ಸಚಿವ ಸತೀಶ್ ...

ಬೆಳಗಾವಿ: ರಾಜಕೀಯ ಸ್ಥಿತಿಗತಿಗಳನ್ನು ನಿರ್ವಹಿಸಲು ಸಚಿವ ರಮೇಶ್ ಜಾರಕಿಹೊಳಿ ಇನ್ನೂ ಅಪ್ರಬುದ್ಧರಾಗಿದ್ದಾರೆ, ಕಲಿಯುವುದು ಬಹಳಷ್ಟಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಸಹೋದರನಿಗೆ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಇತ್ತೀಚೆಗೆ, ತಮ್ಮ ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ರಾಜಕೀಯ ಪ್ರವೇಶಿಸಲಿದ್ದು, ಅವರಪ ಯಮನಕರಡಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ, ಹೀಗಾಗಿ ಸತೀಶ್ ಜಾರಕಿಹೊಳಿ ರಾಯಚೂರಿನಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂದು ಹೇಳಿದ್ದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಸತೀಶ್ ತಳ್ಳಿ ಹಾಕಿದ್ದಾರೆ. ರಮೇಶ್ ಮೊದಲ ಬಾರಿಗೆ ಸಚಿವರಾಗಿದ್ದಾರೆ. ನನಗೆ ರಾಜಕಾರಣದಲ್ಲಿ 20 ವರ್ಷಗಳ ಅನುಭವವಿದೆ, ರಾಜಕೀಯದಲ್ಲಿ ರಮೇಶ್ ಇನ್ನೂ ಸುಧಾರಿಸಬೇಕು, ಕಲಿಕೆಗೆ ಇನ್ನೂ ಅವಕಾಶವಿದೆ ಎಂದು ಹೇಳಿದ್ದಾರೆ.

ಗೋಕಾಕ್ ನಲ್ಲಿ ಸ್ಟಂಟ್ ತೋರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ತೋರಲು ಆಗುವುದಿಲ್ಲ, ನನಗೆ ಮನಸಾದರೇ ಯಾವ ಕ್ಷೇತ್ರಕ್ಕೆ ಬೇಕಾದರೂ ಹೋಗಿ ಸ್ಪರ್ಧಿಸುತ್ತೇನೆ, ಯಾರೋ ಹೇಳಿದರು ಎಂದು ನಾನು ಹೋಗುವುದಿಲ್ಲ ಎಂದು ಸತೀಶ್ ಕಿಡಿ ಕಾರಿದ್ದಾರೆ. 2018 ರ ವಿಧಾನಸಭೆ ಚುನಾವಣೆಯಲ್ಲಿ ಯಮನಕರಡಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!