ಮಾಧ್ಯಮ ಸಂವಾದದಲ್ಲಿ ದೇವೇಗೌಡ 
ರಾಜಕೀಯ

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದರೆ ಪ್ರಾದೇಶಿಕ ಪಕ್ಷಗಳಿಗೆ ಮಾರಕ: ದೇವೇಗೌಡ

ಬಿಜೆಪಿ ಎಲ್ಲಾ ಸಂದರ್ಭದಲ್ಲೂ ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ....

ಬೆಂಗಳೂರು: ಬಿಜೆಪಿ ಎಲ್ಲಾ ಸಂದರ್ಭದಲ್ಲೂ ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಒಂದು ವೇಳೆ ಉತ್ತರ ಪ್ರದೇಶದಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಬಿಜೆಪಿಯ ನಾಗಾಲೋಟವನ್ನು ತಡೆಯುವ ಶಕ್ತಿ ಪ್ರಾದೇಶಿಕ ಪಕ್ಷಗಳಿಗೆ ಇಲ್ಲ ಎಂದು ಬುಧವಾರ ಹೇಳಿದ್ದಾರೆ.
ಇಂದು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮಾಜಿ ಪ್ರಧಾನಿ,  ಈಗಾಗಲೇ ಸಂಸತ್ತಿನಲ್ಲಿ ವಿರೋಧ ಪಕ್ಷವಿಲ್ಲ. ಹೆಚ್ಚಿನ ಸ್ಥಾನ ಹೊಂದಿರುವ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆಯವರಿಗೆ ವಿರೋಧ ಪಕ್ಷದ ಮುಖಂಡನ ಗೌರವ ನೀಡಲಾಗಿದೆ ಅಷ್ಟೆ. ಕೆಲವು ಸಂಸ್ಥೆಗಳಿಗೆ ಅಧಿಕಾರಿಗಳನ್ನು, ಮುಖ್ಯಸ್ಥರನ್ನು ನೇಮಕ ಮಾಡುವ ಉನ್ನತ ಮಟ್ಟದ ಸಭೆಯಲ್ಲಿ ಖರ್ಗೆಯವರಿಗೂ ಪಾಲ್ಗೊಳ್ಳಲು ಕರೆಯುತ್ತಾರಷ್ಟೆ. ಇದರಿಂದ ಮುಂದೇನು ಎಂಬ ಆತಂಕ ತಲೆದೋರಿದೆ ಎಂದರು.
ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಕಳೆದೊಂದು ವರ್ಷದಿಂದ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಬೇಕಾದ ಎಲ್ಲವನ್ನೂ ಮಾಡುತ್ತಿದ್ದಾರೆ. ಒಂದೊಮ್ಮೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದ್ರೆ, ಅದನ್ನು ತಡೆಯುವ ಶಕ್ತಿ ಪ್ರಾದೇಶಿಕ ಪಕ್ಷಗಳಿಗೆ ಇಲ್ಲ ಎಂದು ದೇವೇಗೌಡರು ಅಭಿಪ್ರಾಯ ಪಟ್ಟರು. ಅಲ್ಲದೆ ಬಿಜೆಪಿಯಲ್ಲಿ ಬುದ್ಧಿವಂತರಿದ್ದಾರೆ. ಅದರಲ್ಲೂ ಇಲ್ಲದ ಸಂಘರ್ಷ ಸೃಷ್ಟಿ ಮಾಡುವುದರಲ್ಲಿ ಅವರು ನಿಪುಣರು ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ತಮ್ಮ ಪುತ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ಬೆಂಬಲದಿಂದ ಸಿಎಂ ಆಗಿದ್ದರು ಎಂದರು.
ಇನ್ನು ನಮ್ಮದು ವಂಶಪಾರಂಪರ್ಯ ರಾಜಕಾರಣವಲ್ಲ ಎಂದ ಮಾಜಿ ಪ್ರಧಾನಿ, ಎಚ್.ಡಿ.ರೇವಣ್ಣ ಅವರನ್ನು ನಾನು ಮಂತ್ರಿಯಾಗಿ ಮಾಡಲಿಲ್ಲ. ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲರು ರೇವಣ್ಣರನ್ನು ಮಂತ್ರಿಯಾಗಿ ಮಾಡಿದ್ದು. ಮುಂದಿನ ವಿಧಾಸಭೆ ಚುನಾವಣೆಯಲ್ಲೂ ನಮ್ಮ ಪಕ್ಷದಿಂದ ಕುಮಾರಸ್ವಾಮಿ ಹಾಗೂ ರೇವಣ್ಣ ಮಾತ್ರ ಸ್ಪರ್ಧಿಸುತ್ತಾರೆ. ಭವಾನಿ ರೇವಣ್ಣ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ