ಸಂಗ್ರಹ ಚಿತ್ರ 
ರಾಜಕೀಯ

ರಾಜಕೀಯ ನಾಯಕರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ವಿಕೃತಿ: ಯಡ್ಡಿಗೆ ಈಶ್ವರಪ್ಪ ಟಾಂಗ್

ರಾಜಕೀಯ ನಾಯಕರೊಬ್ಬರ ಕಾಲಿಗೆ ಕಾರ್ಯಕರ್ತರು ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್‌'ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜಕೀಯ ನಾಯಕರೊಬ್ಬರ ಕಾಲಿಗೆ ಕಾರ್ಯಕರ್ತರು ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್‌'ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ  ಬುಧವಾರ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸುತ್ತಿದ್ದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಇತ್ತ ಈ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಟಾಂಗ್ ನೀಡಿರುವ ಈಶ್ವರಪ್ಪ ಅವರು,  ರಾಜಕೀಯ ನಾಯಕರೊಬ್ಬರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ಅದೊಂದು ವಿಕೃತಿ ಎಂದು ಟೀಕಿಸಿದರು. ಬೆಂಗಳೂರಿನ ಆನೇಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ  ಅವರು, "ಬಿಜೆಪಿ ಕಾರ್ಯಕರ್ತರು ಯಾವ ದೃಷ್ಟಿಯಿಂದ ಅವರ ಕಾಲಿಗೆ ಬಿದ್ದಿದ್ದಾರೋ ಗೊತ್ತಿಲ್ಲ. ಸ್ಥಾನಮಾನ ಪಡೆಯುವ ದೃಷ್ಟಿಯಿಂದ ಹೀಗೆ ಮಾಡಿದ್ದರೆ ಅದು ಖಂಡಿತಾ ತಪ್ಪು. ಆದರೆ ಯಡಿಯೂರಪ್ಪ ಅವರು ಹಿರಿಯರೆಂಬ  ಕಾರಣದಿಂದ ಅವರ ಕಾಲಿಗೆ ಬಿದ್ದಿದ್ದರೆ ಅದು ಅವರ ವೈಯಕ್ತಿಕ ವಿಚಾರ" ಎಂದು ಹೇಳಿದರು.

ಇದೇ ವೇಳೆ ಬಿಜೆಪಿಯಲ್ಲಿ ಈಗಲೂ ಎಲ್ಲವೂ ಸರಿಯಿಲ್ಲ ಎಂಬ ವಿಚಾರವನ್ನು ಒಪ್ಪಿಕೊಂಡ ಈಶ್ವರಪ್ಪ ಅವರು, ಪಕ್ಷದಲ್ಲಿ ಈಗಲೂ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂದು ಈಶ್ವರಪ್ಪ ತಿಳಿಸಿದರು.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಎರಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)