ಸೋನಿಯಾ ಗಾಂಧಿ ಮತ್ತು ಸಿಟಿ ರವಿ 
ರಾಜಕೀಯ

ಸೋನಿಯಾ ಗಾಂಧಿ ವಿರುದ್ಧ ಸಿ,ಟಿ ರವಿ ವ್ಯಂಗ್ಯ ಟ್ವೀಟ್: ಕಾಂಗ್ರೆಸ್ ನಿಂದ ವ್ಯಾಪಕ ಖಂಡನೆ

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿದೇಶ ಪ್ರವಾಸ ಸಂಬಂಧ ಬಿಜೆಪಿ ವಕ್ತಾರ ಸಿ.ಟಿ.ರವಿ ಟ್ವೀಟ್‌ ಕಾಂಗ್ರೆಸ್‌ ವಲಯದಲ್ಲಿ ಆಕ್ರೋಶಕ್ಕೆ....

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿದೇಶ ಪ್ರವಾಸ ಸಂಬಂಧ ಬಿಜೆಪಿ ವಕ್ತಾರ ಸಿ.ಟಿ.ರವಿ  ಟ್ವೀಟ್‌ ಕಾಂಗ್ರೆಸ್‌ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ.

ಸಿ. ಟಿ.ರವಿ ಮಾತು ಬೇಜವಾಬ್ದಾರಿತನದಿಂದ ಕೂಡಿದೆ. ಸೋನಿಯಾ ಗಾಂಧಿ ಬಗ್ಗೆ ಹೇಳಿಕೆ ನೀಡುವಾಗ ಜವಾಬ್ದಾರಿಯುತ ರಾಜಕಾರಣಿಯಾಗಿ ಮಾತನಾಡಬೇಕು ಅವರ ಮಾತುಗಳಲ್ಲಿ ಒಳ್ಳೆಯ ಅಭಿರುಚಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿ.ಟಿ.ರವಿ ಅವರನ್ನು ನಿಮಾನ್ಸ್‌ಗೆ ಶಿಫ್ಟ್ ಮಾಡಬೇಕು. 2 ಬಾರಿ ಪ್ರಧಾನಿ ಹುದ್ದೆ ತ್ಯಾಗ ಮಾಡಿದ ಮಹಿಳೆಯ ಬಗ್ಗೆ ಈ ರೀತಿಯ ಹೇಳಿಕೆ ನೀಡುವಾಗ ಆಲೋಚನೆ ಮಾಡಬೇಕೆಂದು ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರು ದಶಕಗಳ ಕಾಲ ದೇಶವನ್ನು ಆಳಿದ ಗಾಂಧಿ ಕುಟುಂಬಕ್ಕೆ ಭಾರತದಲ್ಲಿ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಲು ಸಾಧ್ಯವಾಗಿಲ್ಲ,  ಹೀಗಾಗಿ ಸೋನಿಯಾಗಾಂಧಿ ವಿದೇಶಕ್ಕೆ ಹೋಗುತ್ತಾರೆ. ಈ ಬಾರಿಯೂ ಹೋಗಿದ್ದಾರೆ, ಅವರು ಚಿಕಿತ್ಸೆಗೆ ಹೋಗಿದ್ದಾರೋ ಅಥವಾ ಬ್ಯಾಂಕ್‌ ಅಕೌಂಟ್‌ ನಿರ್ವಹಣೆ ಮಾಡಲು ಹೋಗಿದ್ದಾರೋ?  ಹೇಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದೆ, ಏಕೆ ಸೋನಿಯಾ ಗಾಂಧಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಬಾರದು, ಇಲ್ಲಿ ಅವರಿಗೆ ಉತ್ತಮ ಟ್ರೀಟ್ ಮೆಂಟ್ ಸಿಗುತ್ತದೆ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT