ಸಂಗ್ರಹ ಚಿತ್ರ 
ರಾಜಕೀಯ

ರಮ್ಯಾ ಬಿಜೆಪಿಗೆ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಕಾರ್ಯಕರ್ತನಿಂದ ಬಿಎಸ್ ವೈಗೆ ಬೆದರಿಕೆ ಪತ್ರ

ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.

ಮಂಡ್ಯ: ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ  ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ವಿಚಾರದ ಬೆನ್ನಲ್ಲೇ ಮಂಡ್ಯ ಕ್ಷೇತ್ರದ ಮಾಜಿ ಸಂಸದೆ ಮತ್ತು ಚಿತ್ರ ನಟಿ ರಮ್ಯಾ ಕೂಡ ಬಿಜೆಪಿ  ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಬಲವಾಗಿ ಕೇಳಿಬರುತ್ತಿವೆ. ಏತನ್ಮಧ್ಯೆ ರಮ್ಯಾ ಅವರ ಬಿಜೆಪಿ ಸೇರ್ಪಡೆಯನ್ನು ಬಲವಾಗಿ ವಿರೋಧಿಸಿರುವ ಬಿಜೆಪಿ ಕಾರ್ಯಕರ್ತರು, ಒಂದು ವೇಳೆ ರಮ್ಯಾ ಬಿಜೆಪಿ  ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಮಂಡ್ಯ ಬಿಜೆಪಿ ಕಾರ್ಯಕರ್ತಸಿಟಿ ಮಂಜುನಾಥ್ ಎಂಬುವವರು ಈ ಪತ್ರ ಬರೆದಿದ್ದು, ಮಾಜಿ ಸಂಸದೆ ರಮ್ಯಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ತಾನು ಪಕ್ಷದ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗುತ್ತೇನೆ. ಈ  ಹಿಂದೆ ಪಾಕಿಸ್ತಾನದ ಪರ ಮಾತನಾಡಿ ದೇಶದ್ರೋಹಿ ಹೇಳಿಕೆ ನೀಡಿದ್ದ ರಮ್ಯಾ ಈಗ ಬಿಜೆಪಿಗೆ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ  ಎಂದು ಪತ್ರಿಕೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ