ಶ್ರೀನಿವಾಸ್ ಪ್ರಸಾದ್ ಪರ ಬಿಜೆಪಿ ಪ್ರಚಾರ 
ರಾಜಕೀಯ

ನಂಜನಗೂಡು ಉಪ ಚುನಾವಣೆ: ಜಾತಿ ರಾಜಕಾರಣವೇ ಹೈಲೈಟ್

ನಂಜನಗೂಡು ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ಪಕ್ಷಗಳು ಪ್ರಚಾರ ..

ಮೈಸೂರು: ನಂಜನಗೂಡು ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗಾಗಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ಕ್ಯಾಸ್ಟ್ ಕಾರ್ಡ್ ಪ್ಲೇ ಮಾಡಲು ಮುಂದಾಗಿವೆ.

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ 1993ರ ಮಾರ್ಚ್ 25ರಂದು ಲಿಂಗಾಯತ ಹಾಗೂ ದಲಿತ ಸಮುದಾಯದ ನಡುವೆ ನಡೆದ ಸಂಘರ್ಷ ಇದೀಗ ನಂಜನಗೂಡು ಉಪಚುನಾವಣೆ ವಿಷಯವಾಗಿ ಬದಲಾಗುತ್ತಿದೆ. ಘಟನೆ ಸಂಬಂಧ 11 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ 7 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ.ಇದಾದ ನಂತರ ಲಿಂಗಾಯತರು ಮತ್ತು ದಲಿತರು ಇಲ್ಲಿ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಉಪ ಚುನಾವಣೆಗಾಗಿ ಎರಡು ಪಕ್ಷಗಳು ಈ ಘಟನೆಯನ್ನು ಬಂಡವಾಳವನ್ನಾಗಿಸಿಕೊಂಡಿವೆ.
 
ಕಳೆದ ಚುನಾವಣೆಯಲ್ಲಿ ಅಂದರೆ 2006ರ  ವಿಧಾನ ಸಭೆ ಚುನಾವಣೆ ವೇಳೆ  ಬದನವಾಳು ಗಲಾಟೆಯಲ್ಲಿ ಶ್ರೀನಿವಾಸಪ್ರಸಾದ್ ಪಾತ್ರವಿಲ್ಲ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದರು. ಬಿಜೆಪಿ ಮುಖಂಡರು ಶ್ರೀನಿವಾಸಪ್ರಸಾದ್ ದಲಿತರ ಪರ ನಿಲುವು ತಳೆದು ಲಿಂಗಾಯತರಿಗೆ ಅನ್ಯಾಯ ಮಾಡಿದರು ಎಂದು ಪ್ರಚಾರ ಮಾಡುತ್ತಿದ್ದರು.

ಆದರೆ ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಈಗ ಬಿಜೆಪಿ ಮುಖಂಡರ ಮಾತುಗಳನ್ನು ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಮುಖಂಡರ ಮಾತುಗಳನ್ನು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ,  ಕಾಂಗ್ರೆಸ್ ಸಭೆಯಲ್ಲಿ ಎಂ. ಮಹದೇವು ಅವರ ಮೇಲೆ ದಾಳಿ ನಡೆಸಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಮಹಾದೇವು ಅವರ ಮನೆಗೆ ಭೇಟಿ ನೀಡಿ, ಅವರ ಕುಟುಂಬದವರ ಕ್ಷಮೆ ಕೋರಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಹಾದೇವು ಅವರ ಮನೆಗೆ ಭೇಟಿ ನೀಡಿ ಕ್ಷಮೆಯಾಚಿಸಿರುವ ವಿಡಿಯೋ ವಾಟ್ಸ್ಯಾಪ್ ಗಳಲ್ಲಿ ಹರಿದಾಡುತ್ತಿದೆ. ಅದರಲ್ಲೂ ಕ್ಷೇತ್ರದ ವೀರಶೈವ ಸಮುದಾಯದ ಜನತೆಗೆ ಈ ವಿಡಿಯೋವನ್ನು ಕಳುಹಿಸಲಾಗುತ್ತಿದೆ.

ವೀರಶೈವ ಸಮುದಾಯ ಪ್ರಾಬಲ್ಯ ಹೊಂದಿರುವ ಗ್ರಾಮಗಳಲ್ಲಿ ಕಾಂಗ್ರೆಸ್ ಬದನವಾಳು ಘಟನೆಯ ಬಗ್ಗೆ ಚರ್ಚಿಸುತ್ತಿದೆ. ಈ ಹಿನ್ನೆಲೆಯಲ್ಲಿ  ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿರುವ ಬಿಜೆಪಿ, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವಿ. ಸೋಮಣ್ಣ ಅವರನ್ನು ನಿಯೋಜಿಸಿದೆ.

ಪ್ರಮುಖ ಸಮುದಾಯಗಳ ಜನ ಮತಗಳನ್ನು ಸೆಳೆಯಲು ಎರಡು ಪಕ್ಷಗಳು ಪ್ರಬಲ ನಾಯಕರನ್ನು ಪ್ರಚಾರಕ್ಕೆ ನಿಯೋಜಿಸಿದೆ. ನಂಜನಗೂಡು ಕ್ಷೇತ್ರದಲ್ಲಿರುವ ನಾಯಕ ಸಮುದಾಯದ ಮತಗಳನ್ನು ಪಡೆಯಲು ಯೋಜನೆ ರೂಪಿಸಿರುವ ಬಿಜೆಪಿ ಶ್ರೀರಾಮುಲು ಅವರನ್ನು ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದೆ. ಚುನಾವಣಾ ಪ್ರಚಾರದ ಅಂತಿಮ ದಿನದವರೆಗೂ ಕ್ಷೇತ್ರದಲ್ಲಿ ಇರುವಂತೆ ಸೂಚಿಸಿದೆ. ಇದಕ್ಕೆ ಪ್ರತಿತಂತ್ರ ರೂಪಿಸಿರುವ ಕಾಂಗ್ರೆಸ್ ನಾಯಕ್ ಸಮುದಾಯದ ಪ್ರಭಾವಿ  ರಾಜಕಾರಣಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನಂಜನಗೂಡು ವಿಧಾನ ಸಭೆ ಚುನಾವಣಾ ಪ್ರಚಾರಕ್ಕೆ ಕರೆ ತಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT