ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ವಿಷಯ: ಸಿಎಂ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡನೆ ಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಹಚ್ಚು ಚ್ಯುತಿ ಮಂಡನೆ ಸಂಬಂಧ ವಿಷಯವನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸಬೇಕೇ ಬೇಡವೆ ಎಂಬ ಕುರಿತು ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ಹಚ್ಚು ಚ್ಯುತಿ ಮಂಡನೆ ಸಂಬಂಧ  ವಿಷಯವನ್ನು ಹಕ್ಕುಬಾಧ್ಯತಾ ಸಮಿತಿಗೆ ವಹಿಸಬೇಕೇ ಬೇಡವೆ ಎಂಬ ಕುರಿತು ಯಾವುದೇ ತೀರ್ಮಾನ ಪ್ರಕಟಿಸದ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ರೂಲಿಂಗ್‌ ಕಾಯ್ದಿರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹೋರಾಟ ಕುರಿತು ಸದನದಲ್ಲಿ ಚರ್ಚೆ ನಡೆಯುತ್ತಿದ್ದಾಗ ಸಿದ್ದರಾಮಯ್ಯ ಸುಳ್ಳು ಹೇಳಿ ಸದನದ ದಾರಿ ತಪ್ಪಿಸುತ್ತಿದ್ದರು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲರಿದ್ದಾಗ ಒಂದು ಪೈಸೆ ಕೊಡಲಿಲ್ಲ ಎಂದು ಪದೆ ಪದೇ ದೂರಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಹೆಚ್ಚಳ ಮಾಡಿದೆ ಎಂದು ಹೇಳಿದೆ. ಅದನ್ನು ಒಪ್ಪದ ಮುಖ್ಯಮಂತ್ರಿ, ತಪ್ಪು ಮಾಹಿತಿ ಕೊಟ್ಟಿದ್ದರೆ ಹಕ್ಕುಚ್ಯುತಿ ಮಂಡಿಸಿ ಎಂದು ಸವಾಲು ಎಸೆದಿದ್ದರು. ಹೀಗಾಗಿ ಹಕ್ಕುಚ್ಯುತಿ ಮಂಡಿಸಲು ಅವಕಾಶ ಕೊಡಿ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದರು.   

ಮುಖ್ಯಮಂತ್ರಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಶೆಟ್ಟರ್‌ ಕೋರಿದರು. ಪ್ರಶ್ನೋತ್ತರ, ಶೂನ್ಯವೇಳೆ ಮುಗಿದ ಬಳಿಕ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಯಿತು. ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಈ ವಿಷಯ ಕುರಿತು 2 ತಾಸು ಚರ್ಚೆ ನಡೆಯಿತು.

ಹಕ್ಕುಚ್ಯುತಿ ಮಂಡಿಸಲು ಮುಖ್ಯಮಂತ್ರಿಯೇ ಸೂಚಿಸಿದ್ದರು. ಸಭಾಧ್ಯಕ್ಷರೂ ಇದೇ ಸಲಹೆ ನೀಡಿದ್ದರು ಎಂದು ಬಿಜೆಪಿ ಸದ್ಯು ಆಕ್ಷೇಪ ವ್ಯಕ್ತ ಪಡಿಸಿದರು.  ಈ ನಡುವೆ ಮಧ್ಯೆ ಪ್ರವೇಶಿಸಿದ ಸಭಾಧ್ಯಕ್ಷ ಕೋಳಿವಾಡ ರೂಲಿಂಗ್ ನೀಡಲು ಕಾಯ್ದಿರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅತ್ಯುನ್ನತ ಹುದ್ದೆಯಲ್ಲಿರುವವರು, ನಮ್ಮ ವಿರುದ್ಧ ಪದೇ ಪದೇ ಹೇಳಿಕೆ ನೀಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು, ತಾಳ್ಮೆ ಇರಬೇಕು, ಯಾವುದೇ ಆರೋಪ ಮಾಡುವ ಮುನ್ನ ಸೂಕ್ತವಾದ ದಾಖಲೆ ಇಟ್ಟುಕೊಳ್ಳಬೇಕು ಎಂದು ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ