ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್: ದೂರು ದಾಖಲು
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಛ ನಾಯಕ ಎಚ್.ಡಿ ದೇವೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ದೂರು
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸರ್ವೋಚ್ಛ ನಾಯಕ ಎಚ್.ಡಿ ದೇವೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
ಮಾರ್ಚ್ 24 ರಂದು ಜಗದೀಶ್ ಗೌಡ ಎಂಬುವರು ತಮ್ಮ ಫೇಸ್ ಬುಕ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದೇಶ ವಿರೋಧಿ ಮತ್ತು ದೇಶ ದ್ರೋಹಿ ಎಂಬ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಜೊತೆಗೆ ಇತರ ಸಾಮಾಜಿಕ ಜಡಾಲತಾಣಗಳಿಗೊ ಪೋಸ್ಟ್ ಮಾಡಿದ್ದರು.
ಇದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತ ರಮೇಶ್ ಗೌಡ ಎಂಬ ದೂರು ದಾಖಲಿಸಿದ್ದು. ಜಗದೀಶ್ ಗೌಡ ಅವರ ಫೇಸ್ ಬುಕ್ ಅಕೌಂಟ್ ಬ್ಲಾಕ್ ಮಾಡಿಸಬೇಕು ಎಂದು ಸೈಬರ್ ಪೊಲೀಸರಿಗೆ ಒತ್ತಾಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.