ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್
ಬೆಂಗಳೂರು: 2018ರ ರಾಜ್ಯ ವಿಧಾನ ಸಬೆ ಚುನಾವಣೆಗೆ ಹೊಸ ಸಾರಥಿಯನ್ನು ನೇಮಿಸಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನಬತನ ಅಧ್ಯಕ್ಷರನ್ನು ನೇಮಿಸಲು ಸಿದ್ಧತೆ ನಡೆಯುತ್ತಿದ್ದು, ಇಂಧನ ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.
ವಿವಿಧ ರಾಜ್ಯಗಳ ಇಂಧನ ಸಚಿವರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿರುವ ಪೈಪೋಟಿ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ.
ಗುರುವಾರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಅಪಾಯಿಂಟ್ ಮೆಂಟ್ ಗಾಗಿ ಡಿಕೆಶಿ ಕಾಯುತ್ತಿದ್ದಾರೆ, ಕೆಪಿಸಿಸ ಅಧ್ಯಕ್ಷ ಹುದ್ದೆಯ ನೇಮಕಾತಿ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ಡಿಕೆಶಿ ಆಪ್ತ ವಲಯ ತಿಳಿಸಿದೆ, ಚುನಾವಣೆ ಸಿದ್ಧತೆ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ರಾಜ್ಯಕ್ಕೆ ಹೊಸ ಉಸ್ತುವಾರಿ ನೇಮಿಸಿದೆ. ಜೊತೆಗೆ ಮೂವರು ಎಂ ಎಲ್ ಸಿಗಳ ನಾಮ ನಿರ್ದೇಶನಕ್ಕೂ ಅಂಕಿತ ಹಾಕಿದೆ.ಮುಂದಿನ ಕೆಲ ದಿನಗಳಲ್ಲೇ ಕೆಪಿಸಿಸಿ ಗೆ ಹೊಸ ಅಧ್ಯಕ್ಷರನ್ನು ನೇಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಮಾಜಿ ಸಚಿವ ಎಸ್ ಆರ್ ಪಾಟೀಲ್, ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹಾಗೂ ಇಂಧನ ಸಚಿವ ಡಿ.ಕೆ ಶಿವಕುಮಾರ್ ಕೂಡ ರೇಸ್ ನಲ್ಲಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸರುವ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಪಕ್ಷದ ಹೈ ಕಮಾಂಡ್ ಯಾವುದೇ ಹೊಣೆಗಾರಿಕೆ ನೀಡಿದರೂ ಅದನ್ನು ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಆದರೆ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲವನ್ನು ಮಾಜಿ ಸಚಿವ ಎಸ್ ಆರ್ ಪಾಟೀಲ್ ಗೆ ನೀಡಲಿದ್ದಾರೆ. ರಾಜ್ಯದಲ್ಲಿ ಅಧಿಕ ಜನಸಂಖ್ಯೆಯಿರುವ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಎಸ್ ಆರ್ ಪಾಟೀಲ್ ನೇಮಕ ಮಾಡಬೇಕೆಂದು ಹೇಳಿದ್ದಾರೆ.ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಲಿಂಗಾಯತರು ತಮ್ಮನ್ನು ಬೆಂಬಲಿಸಿದ್ದಾರೆ ಹೀಗಾಗಿ ಲಿಂಗಾಯತ ಮುಖಂಡನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ನೇಮಿಸಬೇಕೆಂಬುದು ಸಿಎಂ ಸಿದ್ದರಾಮಯ್ಯ ವಾದ.