ಯಡಿಯೂರಪ್ಪ ಮತ್ತು ಅನಂತ್ ಕುಮಾರ್
ಬೆಂಗಳೂರು: ಸಂಭಾಷಣೆ ಸಿಡಿ ಕುರಿತಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸಿಟಿ ಕೋರ್ಟ್ ಆದೇಶಿಸಿದೆ.
ಹೈಕಮಾಂಡ್‌ಗೆ ಕಪ್ಪ ಕಾಣಿಕೆ ನೀಡಿದ ಕುರಿತ ಸಂಭಾಷಣೆಯಿರುವ ಸಿಡಿ ಕುರಿತಂತೆ ತನಿಖೆ ನಡೆಸಿ ಎಂದು ಕಾಂಗ್ರೆಸ್ ಮುಖಂಡರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಧ್ವನಿ ಪರೀಕ್ಷೆಗೆ ಹಾಜರಾಗುವಂತೆ ಯಡಿಯೂರಪ್ಪ ಮತ್ತು ಅನಂತ್‌ಕುಮಾರ್‌ಗೆ ಸೈಬರ್ ಕ್ರೈಂ ಪೊಲೀಸರು ಸೂಚನೆ ನೀಡಿದ್ದರು. ಆದರೆ, ಧ್ವನಿ ಪರೀಕ್ಷೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಬ್ಬರು ನಾಯಕರಿಗೆ 1ನೇ ಎಸಿಎಂಎಂ ಕೋರ್ಟ್, ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದೆ.
ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆ ಸಿಡಿ ಸಿಡಿಯನ್ನು ಬಿಡುಗಡೆ ಮಾಡಿದ್ದರು.