ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ: ಜಮೀರ್ ಅಹ್ಮದ್

ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಸೇರುವುದಾಗಿ ಖಚಿತ ಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರದಿಂದ ಮುಂದಿನ ..

ಬೆಂಗಳೂರು: ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಸೇರುವುದಾಗಿ ಖಚಿತ ಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರದಿಂದ  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ನಗರದ ಕೋಟೆ ಹೈ ಸ್ಕೂಲ್ ಆವರಣದಲ್ಲಿ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್ .ಡಿ ದೇವೆಗೌಡ ನನ್ನನ್ನು ಪಕ್ಷದಿಂದ ದೂರ ಇಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. 
ಈ ಸಂಬಂಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆ , ಚಾಮರಾಜಪೇಟೆಯಿಂದ ನನ್ನ ಸ್ಪರ್ಧೆ ಖಚಿತ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು. ಮುಂದಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ ಎಂದು ಜಮೀರ್ ಲೇವಡಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!