ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಬಿಜೆಪಿ ಕೋರ್ ಕಮಿಟಿ ಸಭೆಗೆ ಹಾಜರಾಗದ ಜಾರಕಿಹೊಳಿ, ಉಮೇಶ್ ಕತ್ತಿ: ಬಿಎಸ್ ವೈ ಅಸಮಾಧಾನ

ಬೆಳಗಾವಿ ತಾಲೂಕಿನ ಹಳಗಾ ಗ್ರಾಮದಲ್ಲಿ ನಡೆದ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆಗೆ ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿ ಗೈರಾಗಿದ್ದರು. ಇದರಿಂದ ...

ಬೆಳಗಾವಿ: ಬೆಳಗಾವಿ ತಾಲೂಕಿನ ಹಳಗಾ ಗ್ರಾಮದಲ್ಲಿ  ನಡೆದ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆಗೆ ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿ ಗೈರಾಗಿದ್ದರು. ಇದರಿಂದ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಎರಡು ದಿನಗಳ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಯಡಿಯೂರಪ್ಪ ರಾಜ್ಯ ಸಭೆ ಸದಸ್ಯ ಪ್ರಭಾಕರ್ ಕೋರೆ ಅವರ ಗೆಸ್ಟ್ ಹೌಸ್ ನಲ್ಲಿ ಮಂಗಳವಾರ ಸಭೆ ಆಯೋಜಿಸಲಾಗಿತ್ತು. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿರುವ ಯಡಿಯೂರಪ್ಪ ಅವರಿಗೆ ಮಾಜಿ ಸಚಿವರುಗಳಾದ ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿ ವಯಕ್ತಿಕ ಕಾರಣಗಳಿಂದಾಗಿ ಸಭೆ ಗೈರಾಗಿದ್ದರು.
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ 2 ಶಾಸಕರೊಂದಿಗೆ ಬಾಲಚಂದ್ರ ಜಾರಕಿಹೊಳಿ ಬಂಡಾಯವೆದ್ದಿದ್ದರು ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಸಭೆಗೆ ಹಾಜರಾಗಿಲ್ಲ ಎಂದು ಬಿಎಸ್ ವೈ ಆಪ್ತರು ಹೇಳಿದ್ದಾರೆ.
ಇನ್ನೂ ಉಮೇಶ್ ಕತ್ತಿ ಅವರ ಸಂಬಂಧಿಯೊಬ್ಬರಿಗೆ ಅನಾರೋಗ್ಯ ಪೀಡಿತರಾಗಿರುವುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ, ಇದರಿಂದ ಬಿಎಸ್ ವೈ ಕೆಂಡಾಮಂಡಲರಾಗಿದ್ದಾರೆ.
ಜಾರಕಿಹೊಳಿ ಅವರಿಗೆ ತುರ್ತು ಕೆಲಸವಿತ್ತು, ಉಮೇಶ್ ಕತ್ತಿ ಅವರ ಸಂಬಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ, ಹೀಗಾಗಿ ಕತ್ತಿ ಬೆಂಗಳೂರಿಗೆ ತೆರಳಿದ್ದಾರೆ. ಇಬ್ಬರು ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT