ಮಲ್ಲಿಕಾರ್ಜುನ ಖರ್ಗೆ, 
ರಾಜಕೀಯ

ಸಾಮೂಹಿಕ ನಾಯಕತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ: ಖರ್ಗೆ

ಮುಂದಿನ ಚುನಾವಣೆ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದ್ದು, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ..

ಬೆಂಗಳೂರು: ಮುಂದಿನ ಚುನಾವಣೆ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದ್ದು, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಲೋಕಸಭಾ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದೆ. ನಾನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿರುವ ಬೆನ್ನಲ್ಲೇ ಖರ್ಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ‘ಚುನಾವಣೆ ಬಳಿಕ ಪಕ್ಷ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ತಿಳಿಸಿದರು.
ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ಮಾತನಾಡುತ್ತಾರೆ. ಅದನ್ನು ಉಳಿದವರು ಕೇಳುತ್ತಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್‌ ವ್ಯವಸ್ಥೆ ಇದೆ. ಹೈ ಕಮಾಂಡ್‌ ಹೇಳಿದ್ದನ್ನುಎಲ್ಲರೂ ಒಪ್ಪಬೇಕು’ ಎಂದು ಅವರು  ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಾನು ಅರ್ಜಿ ಹಾಕಿಲ್ಲ. ಅದರ ತಂಟೆಗೂ ಹೋಗಿಲ್ಲ’ ಎಂದು ಖರ್ಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT