ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ಮಾಜಿ ಸಂಸದ ಎಚ್ ವಿಶ್ವನಾಥ್ ಶೀಘ್ರ ಜೆಡಿಎಸ್ ಸೇರ್ಪಡೆ: ವರದಿ

ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರವೇ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರವೇ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ದೈನಿಕವೊಂದು ವರದಿ ಮಾಡಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯಿಂದ ವಿಶ್ವನಾಥ್ ಅವರು ಬೇಸತ್ತಿದ್ದು, ಜೆಡಿಎಸ್‌ ಸೇರ್ಪಡೆಯತ್ತ ಒಲವು ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಸೋಮವಾರ ಸಂಜೆ ಅವರು  ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು ಎಂದು ಹೇಳಲಾಗಿದೆ. ವಿಶ್ವನಾಥ್ ಅವರ ಈ ಭೇಟಿ ಇದೀಗ ತೀವ್ರ ಕುತೂಹಲ ಕೆರಳಿಸಿದ್ದು, ಈ ಮಾತುಕತೆ ಬಳಿಕ ಜೆಡಿಎಸ್‌ ಸೇರ್ಪಡೆ ಖಚಿತವಾಗಿದ್ದು,  ಮೈಸೂರು ನಗರದಲ್ಲಿ ಶಕ್ತಿ ಪ್ರದರ್ಶನದ ಮೂಲಕವೇ ವಿಶ್ವನಾಥ್‌ ಅವರೊಂದಿಗೆ ಹಳೆ ಮೈಸೂರು ಭಾಗದ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಲು ಜೆಡಿಎಸ್‌ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೆರಡು ದಿನಗಳಲ್ಲಿ ಸಮಾವೇಶದ ಸ್ಥಳ ಮತ್ತು ದಿನಾಂಕ ನಿಗದಿಯಾಗಲಿದ್ದು, ಹುಣಸೂರಿನಿಂದ ವಿಶ್ವನಾಥ್‌ ಸ್ಪರ್ಧೆಗೆ ಎಚ್ ಡಿ ದೇವೇಗೌಡ ಅವರು ಒಪ್ಪಿಗೆ ನೀಡಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)