ಬೆಂಗಳೂರು: 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮಿಷನ್-150 ಗುರಿಯಾಗಿಸಿಕೊಂಡಿರುವ ಬಿಜೆಪಿ ಚುನಾವಣೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರೆ ತರಲು ಚಿಂತನೆ ನಡೆಸುತ್ತಿದೆ.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಬಿಜೆಪಿ 2018ರ ವಿಧಾನ ಸಭೆ ಚುನಾವಣೆಯಲ್ಲಿ, ಈಗಾಗಲೇ ಹಲವು ಜನಪ್ರಿಯ ಕಾರ್ಯಕ್ರಮಗಳಿಂದ ಪ್ರಸಿದ್ಧವಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಚುನಾವಣಾ ಪ್ರಚಾರಕ್ಕೆ ಕರೆ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮೂಲಕ ಯೋಗಿ ಆದಿತ್ಯ ನಾಥ್ ಅವರಿಗೆ ಮನವಿ ಸಲ್ಲಿಸಿ ಕರೆತರಲು ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ನರೇಂದ್ರ ಮೋದಿ ಸರ್ಕಾರದ ಮೂರು ವರ್ಷದ ಆಡಳಿತಾವಧಿಯ ಸಾಧನೆಗಳನ್ನು ರಾಜ್ಯದಲ್ಲಿ 50 ಸ್ಥಳಗಳಲ್ಲಿ ಸಾಧನೆ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.