ಕೆ.ಸಿ ವೇಣುಗೋಪಾಲ್ 
ರಾಜಕೀಯ

ಸಚಿವರು, ಶಾಸಕರ ವಿರುದ್ಧ ಕೈ ಕಾರ್ಯಕರ್ತರ ಅಸಮಾಧಾನ: ವೇಣುಗೋಪಾಲ್ ಗೆ ದೂರು

ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆ ಮಾಡಬೇಕು. ಮತ್ತೊಮ್ಮೆ ಅಧಿಕಾರಕ್ಕೆ ಬರಲೇ ಬೇಕೆಂದು ಪಣತೊಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ...

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆ ಮಾಡಬೇಕು. ಮತ್ತೊಮ್ಮೆ ಅಧಿಕಾರಕ್ಕೆ ಬರಲೇ ಬೇಕೆಂದು ಪಣತೊಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್  ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆ ನಡೆಸುತ್ತಿದ್ದಾರೆ.
ಜಿಲ್ಲಾ ಮಟ್ಟದ ನಾಯಕರುಗಳ ಸಭೆಯಲ್ಲಿ ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ತಾವು ಜಿಲ್ಲೆಗೆ ಭೇಟಿ ನೀಡುವ ಬಗ್ಗೆ ಮಾಹಿತಿ ನೀಡುವುದಿಲ್ಲ, ಸ್ಥಳೀಯ ಮುಖಂಡರ ಜೊತೆ ಸಂಹವನ ನಡೆಸುವುದಿಲ್ಲ, ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳ ಬಗ್ಗೆ ಸ್ಥಳೀಯ ನಾಯಕರ ಜೊತೆ ಚರ್ಚಿಸುವುದಿಲ್ಲ ಎಂದು ಹತ್ತು ಹಲವು ದೂರುಗಳನ್ನು ನೀಡಿದ್ದಾರೆ. 
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮುಖಂಡರು ಕೆಪಿಸಿಸಿ ಕಚೇರಿಯಲ್ಲಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ವೇಣುಗೋಪಾಲ್ ಅವರಿಗೆ ಮುಜುಗರ ಉಂಟು ಮಾಡಿರುವ ಘಟನೆ ಕೂಡ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಹಾಗೂ ಹಾಸನ ಜಿಲ್ಲೆ ಮಾಜಿ ಅಧ್ಯಕ್ಷ ಶಿನರಾಮ್ ಜೆಡಿಎಸ್ ನಿಂದ ಕರೆತಂದವರಿಗೆ ಪ್ರಮುಖ ಹುದ್ದೆಗಳನ್ನು ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜೊತೆಗೆ ಹಾಸನ ಜಿಲ್ಲೆಯಲ್ಲಿ ಹೆಚ್ಚಾಗಿ ಒಕ್ಕಲಿಗ ಸಮುದಾಯದವರಿಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಇತರ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇದಲ್ಲದೇ ಮಂಡ್ಯ ಮುಖಂಡರ ಸಭೆಯಲ್ಲಿ  ಮಾಜಿ ಸಚಿವ ಅಂಬರೀಶ್, ಮಾಜಿ ಸಂಸದೆ ರಮ್ಯಾ ಗೈರಾಗಿದ್ದು  ಕಂಡು ಬಂತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ