ದೇವೇಗೌಡ 
ರಾಜಕೀಯ

ರಾಜ್ಯ ರಾಜಕೀಯವೇ ಸಾಕು- ದೆಹಲಿ ರಾಜಕಾರಣದಲ್ಲಿ ಆಸಕ್ತಿಯಿಲ್ಲ: ದೇವೇಗೌಡ

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಹ್ವಾನವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ..

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಹ್ವಾನವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಯವಾಗಿಯೇ ತಿರಸ್ಕರಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಕಾಲ ಸನ್ನಿಹಿತವಾಗಿದ್ದು ಬಿಜೆಪಿ ಹಾಗೂ ಪ್ರತಿಪಕ್ಷಗಳು ಅಭ್ಯರ್ಥಿಯ ಹುಡುಕಾಟ ನಡೆಸಿವೆ. ಬಿಜೆಪಿಗೆ ಸಾಕಷ್ಟು ಮತಗಳಿದ್ದರೂ ಪ್ರತಿಪಕ್ಷಗಳ ಸಾಲಿನಲ್ಲಿರುವ ಒಂದೆರಡು ಪಕ್ಷಗಳ ಬೆಂಬಲ ಅಗತ್ಯವಿದೆ. ಹೀಗಾಗಿ ಪ್ರತಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬಿಜೆಪಿಯನ್ನು ಮಣಿಸಲು ತಂತ್ರಗಾರಿಕೆ ರೂಪಿಸುತ್ತಿವೆ.
ಈ ಸಂಬಂಧ ಈಗಾಗಲೇ ಸೋನಿಯಾಗಾಂಧಿ ಪ್ರತಿಪಕ್ಷಗಳ ಸಭೆ ನಡೆಸಿದ್ದು, ರಾಷ್ಟ್ರಪತಿ ಅಭ್ಯರ್ಥಿ ಕುರಿತು ಮಾತುಕತೆ ನಡೆಸಿದ್ದಾರೆ. ಬಹುತೇಕ ಪಕ್ಷಗಳು ಕಾಂಗ್ರೆಸ್‌‌ ಸೂಚಿಸುವ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಹಿರಿಯ ರಾಜಕೀಯ ಮತ್ಸದ್ಧಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಕಣಕ್ಕಿಳಿಸಲು ಸೋನಿಯಾಗಾಂಧಿ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 
ದೇವೇಗೌಡರು ಎಡಪಕ್ಷಗಳೊಂದಿಗೆ ಹಾಗೂ ಜನತಾ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಮೋದಿ ಪರ ವಾಲುತ್ತಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಗೌಡರನ್ನು ಬೆಂಬಲಿಸುತ್ತಾರೆ. ಹೀಗಾಗಿ ಪ್ರಬಲ ಪೈಪೋಟಿಯನ್ನು ದೇವೇಗೌಡರು ನೀಡುತ್ತಾರೆ ಎಂದು ಗೌಡರನ್ನೇ ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು ಎನ್ನಲಾಗಿದೆ. 
ಆದರೆ ಈ ಸಂಬಂಧ ಹಾಸನದಲ್ಲಿ ಮಾತನಾಡಿರುವ ದೇವೇಗೌಡರು ರಾಜ್ಯ ರಾಜಕಾರಣ ಬಿಟ್ಟು ಬರಲ್ಲ, ನಾನು ಸಕ್ರಿಯ ರಾಜಕಾರಣಿಯಾಗಿಯೇ ಇರಲು ಇಚ್ಛಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ನನಗಿಂತಲೂ ಉತ್ತಮ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದ್ದಾರೆ.ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಗ್ಗೆ ಪ್ರತಿಕ್ರಯಿಸಲು ದೇವೇಗೌಡರು ನಿರಾಕರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!