ಯಡಿಯೂರಪ್ಪ 
ರಾಜಕೀಯ

ಡಿಸೆಂಬರ್ ನಲ್ಲೇ ವಿಧಾನಸಭೆ ಚುನಾವಣೆ: ಯಡಿಯೂರಪ್ಪ ಭವಿಷ್ಯ

ರಾಜ್ಯದಲ್ಲಿ ಡಿಸೆಂಬರ್‌ನಲ್ಲೇ ವಿಧಾನಸಭಾ ಚುನಾವಣೆ ನಡೆದರೆ ಅಚ್ಚರಿಯಿಲ್ಲ. ಅವಧಿಗೆ ಮುನ್ನ ಚುನಾವಣೆ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ...

ಕಲಬುರಗಿ: ರಾಜ್ಯದಲ್ಲಿ  ಡಿಸೆಂಬರ್‌ನಲ್ಲೇ ವಿಧಾನಸಭಾ ಚುನಾವಣೆ ನಡೆದರೆ ಅಚ್ಚರಿಯಿಲ್ಲ. ಅವಧಿಗೆ ಮುನ್ನ ಚುನಾವಣೆ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅವಧಿಗೂ ಮುನ್ನ ಚುನಾವಣೆ ನಡೆಸುವುದು ಬೇಕಿದೆ. ಮುಂದಿನ ವರ್ಷದ ಎಪ್ರಿಲ್ ಅಥವಾ ಮೇ ನಲ್ಲಿ ಚುನಾವಣೆ ನಡೆಯಬೇಕಿತ್ತು, ಆದರೆ ಕಾಂಗ್ರೆಸ್ ಬೇಗನೆ ಚುನಾವಣೆಗೆ ಹೋಗಲು ಸಿದ್ಧವಾಗುತ್ತಿದೆ ,  ಬಿಜೆಪಿ ಕೂಡ ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಸಿದ್ಧವಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ಆನೇಕಲ್‌ನಲ್ಲಿ ಕಳೆದ 6 ತಿಂಗಳಲ್ಲಿ ರಾಜಕೀಯ ವೈಷಮ್ಯ ಹಿನ್ನಲೆ 3 ಕೊಲೆ ಆಗಿವೆ. ನಿನ್ನೆಯೂ ಬಿಜೆಪಿ ಕಾರ್ಯಕರ್ತನ  ಹರೀಶ್ ಎಂಬಾತನ ಹತ್ಯೆಯಾಗಿದ್ದು, ತನಿಖೆ ವಿಳಂಬ ಮಾಡಿ ಕೇಸ್‌ ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದರು. 
ರಾಜ್ಯ ಸರ್ಕಾರ ಜೂನ್ 30ರೊಳಗೆ ರೈತರ ಸಾಲಮನ್ನಾ ಮಾಡಬೇಕು ಇಲ್ಲದಿದ್ದರೇ 5 ಲಕ್ಷಕ್ಕೂ ಅಧಿಕ ರೈತರು ಬೆಂಗಳೂರಿನಲ್ಲಿ ಜುಲೈ 15 ಮತ್ತು 16 ರಂದು ಬೃಹತ್ ಪ್ರತಿಭಟನಾ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT