ಅಮಿತ್ ಶಾ 
ರಾಜಕೀಯ

ಟಿಪ್ಪು ಜಯಂತಿ ಆಚರಿಸುವುದರಿಂದ ರಾಜ್ಯದ ಜನತೆಗೆ ಯಾವುದೇ ಲಾಭ ಇಲ್ಲ: ಅಮಿತ್ ಶಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 1ರ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಬೇಕಿತ್ತು. ಆದರೆ, ನಾಡಿನ ಉತ್ಸವ ಆಚರಿಸಲು....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 1ರ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಬೇಕಿತ್ತು. ಆದರೆ, ನಾಡಿನ ಉತ್ಸವ ಆಚರಿಸಲು ಅವರಿಗೆ ಉತ್ಸಾಹವಿಲ್ಲ. ಅವರಿಗೆ ನವೆಂಬರ್‌ 10ರ ಟಿಪ್ಪು ಜಯಂತಿ ಆಚರಣೆಗೆ ಹೆಚ್ಚು ಉತ್ಸಾಹ ಇದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅಮಿತ್ ಶಾ, ಟಿಪ್ಪು ಜಯಂತಿ ಆಚರಿಸುವುದರಿಂದ ಕರ್ನಾಟಕದ ಜನತೆಗೆ ಯಾವುದೇ ಲಾಭ ಇಲ್ಲ.   ಮತಬ್ಯಾಂಕ್‌ ರಾಜಕಾರಣಕ್ಕಾಗಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಬಿಜೆಪಿ ಆರಂಭಿಸಿರುವ ಈ ಪರಿವರ್ತನಾ ಯಾತ್ರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಲು ಮಾತ್ರ ಅಲ್ಲ. ಇದು ಕರ್ನಾಟಕದ ಸ್ಥಿತಿಯನ್ನು ಬದಲಿಸಲು, ‌ಇಲ್ಲಿನ ಕೃಷಿ, ಯುವಕರ ಸ್ಥಿತಿ, ಕಾನೂನು ಸುವ್ಯವಸ್ಥೆ ಬದಲಿಸಲು ಆರಂಭವಾಗಿರುವ ಪರಿವರ್ತನಾ ಯಾತ್ರೆ ಎಂದು ಶಾ ಹೇಳಿದ್ದಾರೆ.
ಯಾವ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಉತ್ತಮ ಆಡಳಿತ ನೀಡಿದ್ದೇವೆ. ಆದರೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಅವರು ಭ್ರಷ್ಟರನ್ನು ರಕ್ಷಿಸುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಅನುದಾನ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2 ಲಕ್ಷ ಕೋಟಿ ರುಪಾಯಿಗೂ ಹೆಚ್ಚು ಅನುದಾನ ನೀಡಿದೆ. ಆದರೆ ಸಿದ್ದರಾಮಯ್ಯ 1 ಲಕ್ಷ ಕೋಟಿಯ ಲೆಕ್ಕ ಮಾತ್ರ ಹೇಳುತ್ತಾರೆ. ಹಾಗಾದರೆ ಉಳಿದ 1 ಲಕ್ಷ ಕೋಟಿಯಷ್ಟು ಹಣ ಎಲ್ಲಿ ಹೋಯಿತು. ಇದು ರಾಜ್ಯದ ಕಾಂಗ್ರೆಸ್‌ನ ಭ್ರಷ್ಟರ ಪಾಲಾಗಿದೆ ಎಂದ ಅಮಿತ್ ಶಾ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ಕನಿಷ್ಠ 10 ಬಿಜೆಪಿ-ಆರ್‌ಎಸ್ಎಸ್‌ ಕಾರ್ಯಕರ್ತರ ಹತ್ಯೆಯಾಗಿದೆ. ಇದಕ್ಕೆ ನಿಮ್ಮ ಬಳಿ ಉತ್ತರವಿದೆಯೇ? ಎಂದು ಶಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ