ಅಮಿತ್ ಶಾ 
ರಾಜಕೀಯ

ಖಾಲಿ ಕುರ್ಚಿ ನೋಡಿ ಶಾ ಗರಂ: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಸಿಡಿಮಿಡಿ

ಆಯೋಜಕರು ಸುಮಾರು 1ಲಕ್ಷ ಕುರ್ಚಿ ಹಾಕಿದ್ದರು. ಕುರ್ಚಿ ಖಾಲಿಯಿರುವುದನ್ನು ಕಂಡ ಅಮಿತ್ ಶಾ ವೇದಿಕೆ ಮೇಲೆಯೇ ರಾಜ್ಯ ಬಿಜೆಪಿ ನಾಯಕರನ್ನು ...

ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಪರಿವರ್ತನಾ ರ್ಯಾಲಿಯಲ್ಲಿ ಸುಮಾರು 2 ಲಕ್ಷ ಮಂದಿ ಭಾಗವಹಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.
ಪರಿವರ್ತನಾ ರ್ಯಾಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಸಾವಿರಾರು ಖಾಲಿ ಕುರ್ಚಿಗಳನ್ನು  ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಕಾರ್ಯಕ್ರಮ ಆಯೋಜಕರು ಸುಮಾರು 1ಲಕ್ಷ ಕುರ್ಚಿ ಹಾಕಿದ್ದರು. ಕುರ್ಚಿ ಖಾಲಿಯಿರುವುದನ್ನು ಕಂಡ ಅಮಿತ್ ಶಾ ವೇದಿಕೆ ಮೇಲೆಯೇ ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
ಶಾಸಕರು, ಎಂ ಎಲ್ ಸಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ದೂರದಲ್ಲಿ ನಿಂತಿದ್ದ ಜನರನ್ನು ವೇದಿಕೆ ಮುಂಭಾಗಕ್ಕೆ ಕರೆತರಲು ಪ್ರಯ್ನಿಸಿದ್ದರು. ಹಲವು ಮಂದಿ ಬಿಸಿಲ ಝಳ ತಾಳದೇ ಮರದಡಿ ಆಶ್ರಯ ಪಡೆದಿದ್ದರು, ಮತ್ತಷ್ಟು ಮಂದಿ ಬೈಕ್ ಪಾರ್ಕಿಂಗ್ ಸ್ಥಳ ಹಾಗೂ ಊಟದ ಕೌಂಟರ್ ಬಳಿ ನಿಂತಿದ್ದರು. ಹೀಗಾಗಿ ಕುರ್ಚಿಗಳು ಬಣಗುಡುತ್ತಿದ್ದವು
ಈ ಸಂಬಂಧ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಪರಿವರ್ತನಾ ಯಾತ್ರೆಗೆ ಬರುತ್ತಿದ್ದ ಜನರನ್ನು ತಡೆದು ವಾಪಸ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಡಳಿತ ಬಿಜೆಪಿ ಕಾರ್ಯಕರ್ತರು ಪರಿವರ್ತನಾ ಯಾತ್ರೆಗೆ ಬರುವುದನ್ನು ತಡೆಗಟ್ಟಿದೆ ಎಂದು ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮತ್ತು ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!