ರಾಜಕೀಯ

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಹಿಂದೆ ಸಿಎಂ ಬ್ರೇನ್: ಜಗದೀಶ್ ಶೆಟ್ಟರ್

Lingaraj Badiger
ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ರಾಜಕೀಯ ಪ್ರೇರಿತ ಮತ್ತು ಕಾಂಗ್ರೆಸ್ ಪ್ರಾಯೋಜಿತ ಎಂದು ಸೋಮವಾರ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಬಿ ಎಸ್ ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಲಿಂಗಾಯತರ ಮತ ಹೊಡೆಯುವ ಉದ್ದೇಶದಿಂದ ಕಾಂಗ್ರೆಸ್ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಹುಟ್ಟುಹಾಕಿದ್ದು, ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬ್ರೇನ್ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಲಿಂಗಾಯತ ಪ್ರತ್ಯೇಕ ಧರ್ಮದ ಹಿಂದೆ ಜಾತಿ ರಾಜಕೀಯ ಮತ್ತು ಚುನಾವಣಾ ರಾಜಕೀಯ ಕೆಲಸ ಮಾಡುತ್ತಿದೆ. ಹೀಗಾಗಿಯೇ ಲಿಂಗಾಯತರ ಸಮಾವೇಶಗಳಲ್ಲಿ ಬಿಜೆಪಿಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶೆಟ್ಟರ್ ದೂರಿದ್ದಾರೆ.
ಪ್ರಾಮಾಣಿಕವಾಗಿ ಮತ್ತು ನಮ್ಮೊಂದಿಗೆ ಸೂಕ್ತ ಸಮಾಲೋಚನೆ ನಡೆಸಿ ಪ್ರತ್ಯೇಕ ಧರ್ಮದ ಹೋರಾಟ ಆರಂಭಿಸಿದ್ದರೆ ನಾವು ಖಂಡಿತ ಬೆಂಬಲ ನೀಡುತ್ತಿದ್ದೇವೆ. ಆದರೆ ಹೊಸ ಧರ್ಮ ಘೋಷಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸೌಲಭ್ಯಗಳ ಅಗತ್ಯವಿದ್ದರೆ ಅಲ್ಪ ಸಂಖ್ಯಾತರ ಸ್ಥಾನಮಾನ ಕೇಳಬಹುದು. ಆದರೆ ಸಿಎಂ ಸಿದ್ದರಾಮಯ್ಯ ಸಮಾಜ ಹೊಡೆಯುವುದಕ್ಕಾಗಿ ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟಿದ್ದಾರೆ ಎಂದು ಶೆಟ್ಟರ್ ಆರೋಪಿಸಿದ್ದಾರೆ.
SCROLL FOR NEXT