ಬೆಂಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ರಾಜಕೀಯ ಕಾರಣಗಳಿಗಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ, ಕೇಂದ್ರ ಬಿಜೆಪಿ ಸರ್ಕಾರ ನನ್ನ ಫೋನ್ ಕದ್ದಾಲಿಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಆರೋಪಿಸಿದ್ದಾರೆ.
ಹಿರಿಯ ಸಚಿವರುಗಳಾದ ಡಿ.ಕೆ ಶಿವಕುಮಾರ್, ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರುಗಳ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ದೂರಿದ್ದಾರೆ.
ಕಳೆದ 1 ವರ್ಷದಿಂದ ಕೇವಲ ನನ್ನ ಫೋನ್ ಮಾತ್ರವಲ್ಲ, ನನ್ನ ಕುಟುಂಬ ಸದಸ್ಯರು, ನನ್ನ ವಕೀಲರ ಫೋನ್ ಕದ್ದಾಲಿಕೆ ಆಗುತ್ತಿದೆ. ಇದಕ್ಕೆ ನಾನು ಹೆದರುವುದಿಲ್ಲ . ಈ ವಿಷಯವನ್ನು ನಾನು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಆಪಾದಿಸಿದ್ದಾರೆ..
ನನ್ನ ಪತ್ನಿ, ದೊಡ್ಡ ಮಗನ ಪೋನ್ ಟ್ಯಾಪಿಂಗ್ ನಡೆದಿದೆ. ಕೇಂದ್ರ ಗೃಹ ಇಲಾಖೆ, ಐಟಿ ಅಥವಾ ಸಿಬಿಐನಿಂದ ಫೋನ್ ಕದ್ದಾಲಿಕೆ ನಡೆದಿರಬಹುದು. ನನ್ನ ಫೋನ್ ಟ್ಯಾಪಿಂಗ್ ಆಗಿರುವ ಬಗ್ಗೆ ಸ್ನೇಹಿತರೊಬ್ಬರು ಡೆಮೊ ತೋರಿಸಿದರು. ನನ್ನ ಫೋನ್ ಟ್ಯಾಪಿಂಗ್ ಆಗಿರುವ ಬಗ್ಗೆ ಬಹಿರಂಗಡಿಸುತ್ತೇನೆ. ಆದರೆ ನಾನು ಯಾವುದಕ್ಕೂ ಅಂಜುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣು ಗೋಪಾಲ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದರು,
ಕಾಂಗ್ರೆಸ್ ನಾಯಕರುಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸರ್ಕಾರ ಯಾವುದೇ ಎಜೆನ್ಸಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿಲ್ಲ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳು ತಮ್ಮ ಕೆಲಸ ಮಾಡುತ್ತಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics