ಎಚ್.ಡಿ ದೇವೇಗೌಡ 
ರಾಜಕೀಯ

ಕೇವಲವಾಗಿ ಮಾತನಾಡಿ ನನ್ನನ್ನು ಕೆಣಕಬೇಡಿ: ಸಿದ್ದರಾಮಯ್ಯಗೆ ದೇವೇಗೌಡ ಎಚ್ಚರಿಕೆ

: ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರಂಭಿಸಿರುವ "ಕರ್ನಾಟಕ ವಿಕಾಸ ವಾಹಿನಿ' ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಹಾಸನ: ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರಂಭಿಸಿರುವ "ಕರ್ನಾಟಕ ವಿಕಾಸ ವಾಹಿನಿ' ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕೆಂಡಮಂಡಲವಾಗಿದ್ದಾರೆ. 
ಸಿಎಂ ಮಾತಿನಿಂದ ವಿಚಲಿತರಾಗಿರುವಂತೆ ಕಂಡ ದೇವೇಗೌಡರು ಸಿದ್ದರಾಮಯ್ಯ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 
ನಿಮ್ಮನ್ನು, ಯಡಿಯೂರಪ್ಪನವರನ್ನು ಈವರೆಗೂ ಗೌರವದಿಂದಲೇ ಕಂಡಿದ್ದೇನೆ. ಎಂದೂ ಲಘುವಾಗಿ ಮಾತನಾಡಿಲ್ಲ. ನನ್ನನ್ನು ಕೆಣಕಬೇಡಿ. ಮಾತುಗಳ ಮೇಲೆ ಹಿಡಿತವಿರಲಿ. ನಾನು ಇಲ್ಲಿಯವರೆಗೂ ತಡೆದಿದ್ದೇನೆ. ಈಗ ನಿಮ್ಮ ವ್ಯಂಗ್ಯದ ಮಾತುಗಳನ್ನು ಕೇಳಲು ಹೇಸಿಗೆಯಾಗುತ್ತದೆ ಎಂದು ದೇವೇಗೌಡ ಕಿಡಿ ಕಾರಿದ್ದಾರೆ.
ಅರಸೀಕೆರೆಯಲ್ಲಿ ವಾಲ್ಮೀಕಿ ಭವನ ಉದ್ಘಾಟಿಸಿ ಮಾತನಾಡಿದ ಅವರು, ದೇವೇಗೌಡರು ಒಂದೂವರೆ ವರ್ಷ, ಕುಮಾರಸ್ವಾಮಿ 20 ತಿಂಗಳಲ್ಲಿ ಜನಪರ ಕಾರ್ಯಕ್ರಮಗಳನ್ನು ನೀಡಲಿಲ್ಲವಾ? ಹೃದಯದ ಶಸ್ತ್ರಚಿಕಿತ್ಸೆಯಾಗಿ ಒಂದು ತಿಂಗಳಾಗಿದೆ. ಅಂತಹ ಕುಮಾರಸ್ವಾಮಿಯವರ ಬಗ್ಗೆ ಮಾತನಾಡಲು ಕನಿಷ್ಠ ಸೌಜನ್ಯ ಬೇಡವಾ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT