ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ 
ರಾಜಕೀಯ

ಕುಂದಾಪುರ: ಹಾಲಾಡಿ ಶ್ರೀನಿವಾಸ ಶೆಟ್ಟಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ, ಲಾಠಿಚಾರ್ಚ್

ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ.......

ಕುಂದಾಪುರ: ಕುಂದಾಪುರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಯದಲ್ಲಿ ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿಗ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದು ಸಂಘರ್ಷಮಯ ಪರಿಸ್ಥಿತಿ  ಏರ್ಪಟ್ಟಿತ್ತು. 
ಕುಂದಾಪುರದ ನೆಹರೂ ಮೈದಾನದಲ್ಲಿ ನಡೆದ ಸಮಾವೇಶದ ಸಂದರ್ಭ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ, ಹಾಲಾಡಿ ಅವರ ಬೆಂಬಲಿಗರು ವಾಗ್ವಾದಕ್ಕಿಳಿದಿದ್ದರು. ಆ ವೇಳೆ  ಉಭಯ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಲಾಠಿಚಾರ್ಚ್ ಮಾಡಿದ ಘಟನೆ ಜರುಗಿತು.
ಕೆಲವೊಬ್ಬರು ಬ್ಯಾನರ್ ಹಿಡಿದು ಹಾಲಾಡಿ ವಿರುದ್ಧ ಘೋಷಣೆ ಕೂಗಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವೇದಿಕೆಯಲ್ಲಿ ಮಾತನಾಡುತ್ತಾ ಹಿರಂಗವಾಗಿಯೇ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಪರ ಹೇಳಿಕೆ ನೀಡಿದರು. ಈ ಪ್ರಕಾರ ಶಾಸಕರ ವಿರುದ್ಧ ಮಾತನಾಡುವವರಿಗೆ ಬಿಸಿ ಮುಟ್ಟಿಸಿದ್ದರು.
"ಹಾಲಾಡಿಯವರು ಪಕ್ಷಕ್ಕೆ ಬೇಕು, ಇಷ್ಟಪಡುವವರು ಇರಬಹುದು, ಇಲ್ಲವಾದರೆ ಬಿಟ್ಟು ಹೋಗಿ" ಎಂದ ಬಿಎಸ್ ವೈ ಹಾಲಾಡಿ ಶ್ರೀನಿವಾಸ ಶೆತ್ಟರ ವಿರೋಧಿಗಳಿಗೆ ಖಡಕ್ ಉತ್ತರ ನೀಡಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಇಂದು ಕುಂದಾಪುರ, ಬೈಂದೂರು, ಭಟ್ಕಳಗಳನ್ನು ಹಾದು ಹೋಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ