ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ಅಡ್ಡಿಪಡಿಸಬೇಡಿ: ಬಿಜೆಪಿಗೆ ಜೆಡಿಎಸ್

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಬೇಕಿದ್ದು, ಅಧಿವೇಶನಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಬೇಕಿದ್ದು, ಅಧಿವೇಶನಕ್ಕೆ ಅಡ್ಡಿಯುಂಟು ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಶೀಘ್ರದಲ್ಲಿಯೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಮಾತುಕತೆ ವೇಳೆ ರಾಜಕೀಯ ಪೇರಿತ ವಿಚಾರಗಳಿಂದ ಅಧಿವೇಶನದ ಸಮಯವನ್ನು ವ್ಯರ್ಥ ಮಾಡದಂತೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತಂತೆ ಚರ್ಚೆ ನಡೆಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಕಳೆದ ಬಾರಿ ನಡೆದ ಅಧಿವೇಶನದಲ್ಲಿ ರಾಜಕೀಯ ಪ್ರೇರಿತ ವಿಚಾರಗಳು ಚರ್ಚೆಯಾಗಿದ್ದರಿಂದಾಗಿ ಅಧಿವೇಶನದ ಸಮಯ ಹಾಗೂ ಸಾರ್ವಜನಿಕರ ಹಣ ವ್ಯರ್ಥವಾಗಿತ್ತು. ಒಂದು ವೇಳೆ ಬಿಜೆಪಿ ತನ್ನ ಪ್ರತಿಭಟನೆಯನ್ನು ಹೀಗೆಯೇ ಮುಂದುವರೆಸಿದ್ದೇ ಆದರೆ, ಜೆಡಿಎಸ್ ತನ್ನ ಮೌನವನ್ನು ಮುಂದುವರೆಸಲಿದೆ. ರಾಜಕೀಯ ತಂತ್ರಗಳ ಬಳಕೆ ಬದಲು ಅಧಿವೇಶನದಿಂದ ಧನಾತ್ಮಕ ಪ್ರತಿಫಲಗಳು ಬರುವುದನ್ನು ಜೆಡಿಎಸ್ ಬಯಸುತ್ತದೆ ಎಂದು ಜೆಡಿಎಸ್ ನಾಯಕರೊಬ್ಬರು ಹೇಳಿದ್ದಾರೆ. 
ಈ ನಡುವೆ ಪಟ್ಟು ಬಿಡದ ಬಿಜೆಪಿ ಸದಸ್ಯರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪ ಎದುರಿಸುತ್ತಿರುವ ಸಚಿವ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!