ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ
ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ವಕೀಲರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಅವರ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ಧರಣಿ ನಡೆಸಿದ ಹಿನ್ನಲೆಯಲ್ಲಿ ಕೊನೆಯ ದಿನದ ಕಲಾಪ ಸಂಪೂರ್ಣವಾಗಿ ಆಹುತಿಯಾಯಿತು.
ಧಾರವಾಡ ಜಿಲ್ಲೆಯ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಸಚಿವ ವಿನಯ್ ಕುಲಕರ್ಣಿಯವರು ಹಸ್ತಕ್ಷೇ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಸದಸ್ಯರು ಉಭಯ ಸದನಗಳಲ್ಲಿ ವಿಷಯ ಪ್ರಸ್ತಾಪ ಮಾಡಿದರು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಸದನದಲ್ಲಿ ಸರಣಿ ಆರಂಭಿಸಿದ್ದರು. ಆದರೆ, ಪ್ರಶ್ನೋತ್ತರದ ಬಳಿಕ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಧ್ಯಕ್ಷರು ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ.
ಬಿಜೆಪಿ ಸದಸ್ಯರು ತೀವ್ರವಾಗಿ ಧರಣಿ ನಡೆಸಿದ ಹಿನ್ನಲೆಯಲ್ಲಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು. ಕೊನೆಗೂ ಬಿಜೆಪಿ ಸದಸ್ಯರು ಧರಣಿಯನ್ನು ಹಿಂದಕ್ಕೆ ತೆಗೆದುಕೊಳ್ಳದ ಕಾರಣ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು.
ಇನ್ನು ವಿಧಾನಪರಿಷತ್ ನಲ್ಲಿಯೂ ಪ್ರಶ್ನೋತ್ತರ ಕಲಾಪದ ಬಳಿಕ ಚರ್ಚೆಗೆ ಅವಕಾಶ ಕೋರಿ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಬಳಿಕ ವಿನಯ್ ಕುಲಕರ್ಣಿಯವರನ್ನು ಸಮರ್ಥಿಸಿಕೊಂಡು ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು, ಯೋಗೇಶ್ ಗ1ಡ ಅವರ ಕೊಲೆಗೆ ಭೂ ತಕರಾರು ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
ಬಳಿಕ ಸರ್ಕಾರದ ವಿರುದ್ಧ ಆರೋಪ ಮಾಡಿದ ವಿಪಕ್ಷ ನಾಯಕ ಶೆಟ್ಟರ್ ಅವರು, ಈಗಾಗಲೇ ಒಬ್ಬರು ಸಚಿಚವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಯೋಗೇಸ್ ಗೌಡ ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ವಿ್ಯ್ ಕುಲಕರ್ಣಿಯವರು ಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ. ಇದೇ ವೇಳೆ ಅರ್ಕಾವತಿ ಲೇಔಟ್ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರಿಗೆ ವಿನಯ್ ಕುಲಕರ್ಣಿಯವರು ಬೆದರಿಕೆ ಹಾಕಿರುವ ಆಡಿಯೋವೊಂದು ನಿನ್ನೆಯಷ್ಟೇ ಬಹಿರಂಗಗೊಂಡಿತ್ತು. ಯುವ ವಕೀಲ ಆನಂದ ಬಾಡಿ ಅವರಿಗೆ ಸಚಿವ ಕುಲಕರ್ಣಿಯವರು ನ.20 ರಂದು ದೂರವಾಣಿ ಮೂಲಕ ಕರೆ ಮಾಡಿದ್ದು ಎನ್ನಲಾಕಿರುವ 14, 31 ನಿಮಿಷಗಳ ಸಂಭಾಷಣೆ ಆಡಿಯೋವೊಂದು ಖಾಸಗಿ ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದವು.