ಸಿದ್ದರಾಮಯ್ಯ 
ರಾಜಕೀಯ

ಯಡಿಯೂರಪ್ಪ, ಕೈ ಮುಗಿತೀನಪ್ಪ, ಮೊದಲು ಮಹದಾಯಿ ವಿವಾದ ಬಗೆಹರಿಸಿ: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪ ಒಂದು ತಿಂಗಳಲ್ಲಿ ಮಹಾದಾಯಿ ವಿವಾದ ಬಗೆಹರಿಸುತ್ತೇನೆ ಎಂದು ಹೇಳಿದ್ದು, ಯಡಿಯೂರಪ್ಪ ನಿಮಗೆ ಕೈ ಮುಗಿತೀನಪ್ಪ....

ಗದಗ: ಯಡಿಯೂರಪ್ಪ ಒಂದು ತಿಂಗಳಲ್ಲಿ ಮಹಾದಾಯಿ ವಿವಾದ ಬಗೆಹರಿಸುತ್ತೇನೆ ಎಂದು ಹೇಳಿದ್ದು, ಯಡಿಯೂರಪ್ಪ ನಿಮಗೆ ಕೈ ಮುಗಿತೀನಪ್ಪ ದಯವಿಟ್ಟು ಮೊದಲು ಆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಇಂದು ನರಗುಂದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ತಿಂಗಳಲ್ಲಿ ಕಳಸಾ ಬಂಡೂರಿ ವಿವಾದಕ್ಕೆ ಅಂತ್ಯ ಹೇಳಿ ನೀರು ಹರಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.... ನಿಮಗೆ ಕೈ ಮುಗಿಯುವೆ. ಕೈ ಮುಗಿತಿನಿ ದಯವಿಟ್ಟು ಆ ಕೆಲಸ ಮಾಡಿ ಎಂದರು. ಅಲ್ಲದೆ ಮಹದಾಯಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು. ಪ್ರಧಾನಿ ಮಧ್ಯಪ್ರವೇಶಿಸಿದರೆ ಮಾತ್ರ ವಿವಾದ ಅಂತ್ಯ ಹಾಡಲು ಸಾಧ್ಯ ಎಂದರು.
ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿಗೆ ಗೋಗರೆದೆ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನಿ ಮೋದಿಯಂತೆ ಯಾವ ಪ್ರಧಾನಿ ಮಾಡಲಿಲ್ಲ. ಈಗ ಚುನಾವಣೆ ಕಾಲ ಸನ್ನಿಹಿತ ವಾದ ಮೇಲೆ ಬಿಜೆಪಿಯಿಂದ ತಿಂಗಳಲ್ಲಿ ಮಹದಾಯಿ ವಿವಾದ ಇತ್ಯರ್ಥ ಮಾಡುವ ಮಾತು ಬಂದಿದೆ ಎಂದು ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂದಿನ ಆಗಸ್ಟ್ 2018 ರೊಳಗೆ ಮಹದಾಯಿ ಬಗ್ಗೆ ಟ್ರಿಬ್ಯೂನಲ್ ಅಂತಿಮ ತೀರ್ಮಾನ ಆಗಲೇಬೇಕು. ಟ್ರಿಬ್ಯೂನಲ್ ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಬಿಎಸ್‌ವೈ ರೈತ ಪರ ಕಾಳಜಿಯನ್ನು ರಾಜಕೀಯವಾಗಿ ಬಳಸುವುದು ಸರಿಯಲ್ಲ ಎಂದು ಸಿಎಂ ಹೇಳಿದರು.
ನಾವು ಈವರೆಗೆ ನೀರಾವರಿಗಾಗಿ 48,000 ಕೋಟಿ ರುಪಾಯಿ ನೀರಾವರಿ ಇಲಾಖೆಗೆ ಕೊಟ್ಟಿದ್ದೇವೆ. ಬಿಎಸ್‌ವೈ ಮಾತೆತ್ತಿದರೆ ಹಸಿರು ಶಾಲು ಹಾಕಿಕೊಂಡಿದ್ದೆ, ರೈತಪರ ಹೋರಾಟಗಾರ ನಾನು ಎನ್ನುತ್ತಾರೆ. ಹಾಗಾದರೆ ನಾನು ಯಾರು, ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುವುದನ್ನೇ ರಾಜಕೀಯ ಮಾಡಿಕೊಂಡಿದ್ದಾರೆ ಎಂದರು.
ಪ್ರಧಾನಿಗೆ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾಗೆ ಕೈಮುಗಿದು ಕೇಳಿಕೊಂಡೆ. ಬಿಎಸ್‌ವೈ, ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಪ್ರಧಾನಿ ಮೇಲೆ ಒತ್ತಡಕ್ಕೆ ಒತ್ತಾಯಿಸಿದೆ. ಈ ಗಿರಾಕಿಗಳು ತುಟಿ ಪಿಟಕ್ ಅನ್ನಲಿಲ್ಲ. ಸಾಲಮನ್ನಾ ಬಗ್ಗೆ ನೋಟ್ ಪ್ರಿಂಟ್ ಮಷಿನ್ ಇಲ್ಲ ಎಂದು ಬಿಎಸ್‌ವೈ ಹೇಳಿದರು. ಇಂಥವರು ಯಾಕೆ ಹಸಿರು ಶಾಲು ಹಾಕಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video