ರಾಜಕೀಯ

ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜು ಮಾಡುವ ವಿಚಾರದಲ್ಲೂ ಕೇಂದ್ರ ರಾಜಕೀಯ ಮಾಡುತ್ತಿದೆ: ಡಿಕೆಶಿ

Lingaraj Badiger
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕಲ್ಲಿದ್ದಲು ಸರಬರಾಜು ಮಾಡುವ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.
5
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ರಾಜ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಉಂಟಾಗಲು ಕೇಂದ್ರ ಸರ್ಕಾರ ಕಾರಣ. ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಾರಾಷ್ಟ್ರದಿಂದ ಕಲ್ಲಿದ್ದಲು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
'ಈ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿರುವ ರೀತಿ ತುಂಬಾ ಆಘಾತಕಾರಿಯಾಗಿದೆ' ಎಂದು ಇಂಧನ ಸಚಿವರು ಟೀಕಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಡಿಸೆಂಬರ್ 6 ಮತ್ತು 7ರಂದು ದೆಹಲಿಯಲ್ಲಿ ನಡೆಯಲಿರುವ ಎಲ್ಲಾ ರಾಜ್ಯಗಳ ಇಂಧನ ಸಚಿವರ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.
ಈ ಬಾರಿ ಯಾವುದೇ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದ ಸಚಿವರು, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
SCROLL FOR NEXT