ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಧ್ವನಿ ಕುರಿತ ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್ ಸರ್ಕಾರ ಬಿಜೆಪಿ ನಾಯಕರನ್ನು ಸುಳ್ಳು ಪ್ರಕರಣದಲ್ಲಿ ಫಿಕ್ಸ್ ಮಾಡುವ ಆತರದಲ್ಲಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಹೈಕಮಾಂಡ್‌ಗೆ ಕಪ್ಪ ಕೊಟ್ಟಿರುವ ಬಗ್ಗೆ ಸಂಭಾಷಣೆ ನಡೆಸಿದ್ದ ಸಿಡಿಯಲ್ಲಿ ಇರುವುದು ಅನಂತ್‌ಕುಮಾರ್ ಮತ್ತು ಯಡಿಯೂರಪ್ಪ ಅವರದ್ದೇ ಧ್ವನಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿದ ವರದಿ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್ ಅವರು, ಮುಖ್ಯಮಂತ್ರಿ ಸಿದ್ದರಾಮ್ಯ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಅಲ್ಲದೆ ಸಿಡಿಯಲ್ಲಿ ಮಾತನಾಡಿರುವ ಧ್ವನಿ ಯಡಿಯೂರಪ್ಪ, ಅನಂತಕುಮಾರ್ ಅವರದು ಎನ್ನುವ ವರದಿಯೇ ಸಂಶಯಾಸ್ಪದ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ತರಾತುರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ತರಿಸಿದೆ. ಸಿದ್ದರಾಮಯ್ಯ ಪ್ರತಿ ಹಂತದಲ್ಲೂ ಸೇಡಿನ ರಾಜಕೀಯ ಮಾಡುತ್ತಿದ್ದು, ಬಿಜೆಪಿ ನಾಯಕರ ಮೇಲೆ ಮತ್ತು ಯಡಿಯೂರಪ್ಪ ಮೇಲೆ ಸುಳ್ಳು ಕೇಸ್‌ಗಳನ್ನು ಹಾಕಿಸುತ್ತಿದ್ದಾರೆ. ಸಿಎಂ ವಿರೋಧಿಗಳನ್ನು ಹಣಿಯಲು ಆಡಳಿತ ದುರುಪಯೋಗಪಡಿಸುತ್ತಿದ್ದಾರೆ. ಆದರೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕಾಳಜಿ ವಹಿಸಿಲ್ಲ, ಏನೂ ಆಧಾರದ ಇಲ್ಲದೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ ಎಂದು ಶೆಟ್ಟರ್ ಟೀಕಿಸಿದ್ದಾರೆ.
ಸಿದ್ದರಾಮಯ್ಯನವರ ಮೇಲೆ 18 ಕೇಸ್‌ಗಳಿವೆ, ಅವರ ಕುಟುಂಬದ ಮೇಲೆ 24 ಕೇಸ್‌ಗಳು ಎಸಿಬಿಯಲ್ಲಿವೆ. ಅದರ ಬಗ್ಗೆ ತನಿಖೆ ನಡೆಯುತ್ತಿಲ್ಲ. ಯಡಿಯೂರಪ್ಪ, ಅನಂತ್‌ಕುಮಾರ್ ಮಾತನಾಡಿದ ಸಿಡಿ ಬಿಡುಗಡೆ ಬಗ್ಗೆ ಕೇಸ್ ಹಾಕಿದ್ದು ಖಂಡನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics