ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ರಾಜಕೀಯ

ನವೆಂಬರ್ 19ರಿಂದ ರಾಹುಲ್ ಗಾಂಧಿ ರಾಜ್ಯ ಪ್ರವಾಸ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನತೆಗೆ ಮನದಟ್ಟು ಮಾಡಲು ಬಿಜೆಪಿ .....

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನತೆಗೆ ಮನದಟ್ಟು ಮಾಡಲು ಬಿಜೆಪಿ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 19ರಿಂದ ವ್ಯಾಪಕ ಪ್ರಚಾರ ಕೈಗೊಳ್ಳಲಿದ್ದಾರೆ.
ಮೂರು ದಿನ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ, ಮೊದಲ ದಿನ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 20ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿರುವ ರಾಹುಲ್, ಮಧ್ಯಾಹ್ನ ಶಿವಮೊಗ್ಗದಲ್ಲಿ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 21ರಂದು ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸುವರು.
ಬಿಜೆಪಿ ಪ್ರಾಬಲ್ಯವಿರುವ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷದ ಸಮಾವೇಶಗಳಲ್ಲಿ ರಾಹುಲ್ ಭಾಗವಹಿಸುವುದರಿಂದ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಉತ್ತೇಜಿಸಬಹುದು ಎಂಬುದು ನಾಯಕರ ನಿರೀಕ್ಷೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ