ಬೆಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯ ಸರ್ಕಾರದ ಪರ ಬ್ಯಾಟಿಂಗ್ ಮಾಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಪ್ರಧಾನಿ, ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕಬೇಡಿ ಎಂದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿ ಕಾರಿದ್ದಾರೆ.
'ಅನಂತ್ ಕುಮಾರ್ ಹೇಳಿಕೆಯೇ ಅಪ್ರಬುದ್ಧ. ಒಬ್ಬ ಕೇಂದ್ರ ಸಚಿವನಿಗೆ ಇಂತಹ ಧೋರಣೆ ಸರಿಯಲ್ಲ. ಮುಸ್ಲಿಮರನ್ನು ವಿರೋಧಿಸಿಯೇ ನಾನು ಸಚಿವನಾಗಿದ್ದೇನೆ ಎನ್ನುತ್ತಾರೆ. ಹಾಗಾದರೆ ಪ್ರಮಾಣವಚನ ಸ್ವೀಕಾರ ಮಾಡುವ ವೇಳೆ ಏನು ಹೇಳಿದ್ದರು' ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಮುಸ್ಲಿಮರನ್ನು ಬಿಡುವುದು ಅಷ್ಟು ಸುಲಭವಲ್ಲ. ದೇಶದಲ್ಲಿರುವ 25 ಕೋಟಿ ಮುಸ್ಲಿಮರನ್ನು ಓಡಿಸಬೇಕೆ? ಎಂದು ಮಾಜಿ ಪ್ರಧಾನಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics