ಬೆಂಗಳೂರು: ರಾಜ್ಯ ಸರ್ಕಾರದ ಟಿಪ್ಪು ಜಂಯಂತಿ ಆಚರಣೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನಂತರ ಈಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರೂ ಹಾಕದಂತೆ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಶನಿವಾರ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಉತ್ಸುಕವಾಗಿದೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕಬಾರದು ಎಂದು ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಚಿಕ್ಕಮಗಳೂರು - ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟ್ವೀಟ್ ಮಾಡಿದ್ದಾರೆ.
ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ನಾಯಕಿ, ಟಿಪ್ಪು ಸುಲ್ತಾನ್ ಒಬ್ಬ ಕನ್ನಡ ಹಾಗೂ ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿನ್ನೆಯಷ್ಟೇ ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಅನಂತ್ ಕುಮಾರ್ ಹೆಗಡೆ ಅವರು, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಸೇರಿಸುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics