ಸಿದ್ದರಾಮಯ್ಯ 
ರಾಜಕೀಯ

ರಾಜ್ಯಗಳಿಗೆ ಕೇಂದ್ರದ ಅನುದಾನ: ಸಂವಿಧಾನವನ್ನು ಸರಿಯಾಗಿ ಓದಿ-ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ಅಭಿವೃದ್ಧಿ ಮಾಡದ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಒಂದು ನಯಾಪೈಸೆಯ ಅನುದಾನವು ಸಿಗುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಹುಬ್ಬಳ್ಳಿ: ಅಭಿವೃದ್ಧಿ ಮಾಡದ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಒಂದು ನಯಾಪೈಸೆಯ ಅನುದಾನವು ಸಿಗುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. 
ಧಾರವಾಡದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರಕ್ಕೆ ಎಲ್ಲಿಂದ ಹಣ ಬರುತ್ತದೆ? ರಾಜ್ಯಗಳಿಂದ ತಾನೇ. ವಿವಿಧ ರೀತಿಯ ತೆರಿಗೆಗಳಿಂದ ಕೇಂದ್ರದ ಬೊಕ್ಕಸಕ್ಕೆ ಹಣ ಬರುತ್ತಿದ್ದು ಹೀಗಿದ್ದರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಹೇಳುವುದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದು ದಾನವಲ್ಲ. ಇದು ನಮ್ಮ ಹಕ್ಕು ಎಂದು ಹೇಳಿದ್ದಾರೆ.
ಸಂಯುಕ್ತ ರಾಜ್ಯಗಳ ರಚನೆಯಡಿ ರಾಷ್ಟ್ರವು  ನಡೆಯುತ್ತದೆ. ಕೇಂದ್ರವು ಅದರ ಉದ್ದೇಶಿತ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅರಿಯಬೇಕಿದೆ. ಪ್ರಧಾನಿಗಳು ಸಂವಿಧಾನವನ್ನು ಸರಿಯಾಗಿ ಓದಬೇಕಿದೆ ಎಂದು ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ