ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮೀನು ಮಾತ್ರವಲ್ಲ ಕೋಳಿ ಕೂಡ ತಿಂದು ಧರ್ಮಸ್ಥಳಕ್ಕೆ ಹೋಗಿದ್ದೆ: ಸಿಎಂ ಸಿದ್ದರಾಮಯ್ಯ

ನಾನು ಮೀನು ಮಾತ್ರವಲ್ಲ ಕೋಳಿ ಕೂಡ ತಿಂದು ಧರ್ಮಸ್ಥಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಎಂದು ಮುಖ್ಯಮಂತ್ರಿ....

ಚಿಕ್ಕಬಳ್ಳಾಪುರ: ನಾನು ಮೀನು ಮಾತ್ರವಲ್ಲ ಕೋಳಿ ಕೂಡ ತಿಂದು ಧರ್ಮಸ್ಥಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಸಿಎಂ ಸಿದ್ದರಾಮಯ್ಯ ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮೀನಿನ ಜೊತೆ ಕೋಳಿಯೂ ತಿಂದಿರುವುದಾಗಿ ಹೇಳುವ ಮೂಲಕ ಆಸ್ತಿಕರಿಗೆ ತಿರುಗೇಟು ನೀಡಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ದೇವರ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲದವರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನಾನು ಅಂದು ಮೀನು ಮಾತ್ರವಲ್ಲ ಕೋಳಿ ಸಹ ತಿಂದಿದ್ದೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರ ಒತ್ತಾಯಕ್ಕೆ ಮಣಿದು ದೇವಸ್ಥಾನಕ್ಕೆ ಹೋಗಿದ್ದು ನಿಜ. ಆದರೆ ತಡವಾಗುತ್ತದೆ ಎಂಬ ಕಾರಣಕ್ಕೆ ಗರ್ಭಗುಡಿ ಬಳಿ ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಆಹಾರ ಅವರವರ ಸಂಪ್ರದಾಯ, ಪದ್ಧತಿ ಹಾಗೂ ವಿವೇಚನೆಗೆ ಬಿಟ್ಟ ವಿಷಯ. ಒಂದು ವೇಳೆ ಗರ್ಭಗುಡಿಗೆ ಹೋಗಿದ್ದರು ಸಹ ದೇವರು ಯಾವ ರೀತಿ ಅಪವಿತ್ರ ಆಗ್ತಿದ್ದ ನೀವೇ ಹೇಳಿ. ನೀವೆಲ್ಲ ಬೇಡರ ಕಣ್ಣಪ್ಪನ ಕಥೆ ಕೇಳಿಲ್ಲವ.. ಜಿಂಕೆ ಮಾಂಸ ತಿಂದವರಿಗೆ ಶಿವ ಒಲಿದಿದ್ದ ಎಂದು ಬೇಡರ ಕಣ್ಣಪ್ಪನ ಕಥೆ ಹೇಳಿದರು.
ಉಳ್ಳವರು ಶಿವಾಲಯವ ಮಾಡಿಹರು, ನಾನೇನು ಮಾಡಲ್ಲಯ್ಯ ಬಡವ' ಎಂಬ ಬಸವಣ್ಣನವರ ವಚನದ ಮೂಲಕ ಬಿಜೆಪಿಗೆ ಟಾಂಗ್ ನೀಡಿದರು. ಅಲ್ಲದೆ ಮಾನವ ಶರೀರವೇ ದೇಗುಲ ಎಂದು ಬಸವಣ್ಣ ಹೇಳಿದ್ದರು. ಹಾಗಿದ್ದರೆ ಮಾಂಸ ತಿನ್ನುವವರು ಏನು ಮಾಡಬೇಕು. ಮಾಂಸ ಸೇವಿಸಿದ 48 ಗಂಟೆಗಳ ಕಾಲ ದೇಹದಲ್ಲಿ ಮಾಂಸ ಇರುತ್ತದೆ. ಇವರೆಲ್ಲ ಏನು ಮಾಡಬೇಕು ಎಂದು ಸಿಎಂ ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT