ಉಪೇಂದ್ರ 
ರಾಜಕೀಯ

ನಟ ಉಪೇಂದ್ರ ಸಾರಥ್ಯದಲ್ಲಿ ಹೊಸ ಪಕ್ಷ 'ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ' ಉದಯ

ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇತ್ತೀಚೆಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರಾದರೂ ಇಂದು ತಮ್ಮ ನೂತನ ಪಕ್ಷದ ಅಧಿಕೃತ ಹೆಸರನ್ನು ...

ಬೆಂಗಳೂರು:  ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಇತ್ತೀಚೆಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದರಾದರೂ ಇಂದು ತಮ್ಮ ನೂತನ ಪಕ್ಷದ ಅಧಿಕೃತ ಹೆಸರನ್ನು ಘೋಷಿಸಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ  ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ನಟ ಉಪೇಂದ್ರ ಅವರು ತಮ್ಮ ನೂತನ ಪಕ್ಷಕ್ಕೆ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಎಂದು ಹೆಸರಿಟ್ಟಿದ್ದಾರೆ.
ಕುಟುಂಬ ಸಮೇತ ಖಾಕಿ ತೊಟ್ಟು ಉಪೇಂದ್ರ ಆಗಮಿಸಿದ್ದರು, ಎಲ್ಲದರಲ್ಲೂ ಡಿಫರೆಂಟ್ ಚಿಂತನೆ ಮಾಡುವ ಉಪ್ಪಿ ತಮ್ಮ ಪಕ್ಷದ ಹೆಸರು ಘೋಷಣೆಯನ್ನು ವಿಭಿನ್ನವಾಗಿ ಮಾಡಿದ್ದಾರೆ. ವೇದಿಕೆ ಮೇಲೆ ಪತ್ರಕರ್ತರನ್ನು ಕೂರಿಸಿ, ವೇದಿಕೆ ಮುಂಭಾಗ ತಮ್ಮ ಕುಟುಂಬದವರ ಜೊತೆ ಆಸೀನರಾಗಿದ್ದರು.
ಕಲಾವಿದ ವಿಲಾಸ್ ನಾಯಕ್ ಕೆಪಿಜಿಪಿ ಪ್ರತಿಕೃತಿ ರಚಿಸಿದರು. ಪ್ರಜಾಕೀಯ ಆರಂಭಿಸಿದಾಗಿನಿಂದ ಜನರು ಉತ್ತಮವಾಗಿ ನನ್ನನ್ನು ಬೆಂಬಲಿಸಿದ್ದಾರೆ. ರಾಜಕೀಯ ಎಂಬು ಕಾನ್ಸೆಪ್ಟ್ ಬದಲಾಯಿಸುವುದು ನಮ್ಮ ಉದ್ದೇಶ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆ ಅಗತ್ಯವಿದೆ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂದು ಪಕ್ಷ ಘೋಷಣೆ ನಂತರ ಉಪೇಂದ್ರ ಹೇಳಿದ್ದಾರೆ.
ಇನ್ನೂ ಕಾರ್ಯಕ್ರಮಕ್ಕೆ ಉಪೇಂದ್ರ, ಸಂಬಂಧಿಗಳು, ಸ್ನೇಹಿತರು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT