ಗೃಹ ಸಚಿವ ರಾಮಲಿಂಗ ರೆಡ್ಡಿ ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ 
ರಾಜಕೀಯ

ಬಿಬಿಎಂಪಿ ಮೇಯರ್ ಚುನಾವಣೆ: ದೇವೇಗೌಡರನ್ನು ಭೇಟಿಯಾದ ರಾಮಲಿಂಗಾ ರೆಡ್ಡಿ

ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು: ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿ(ಎಸ್) ಮೈತ್ರಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ ಎನ್ನಲಾಗಿದೆ..
ಮಂಗಳವಾರ ಬೆಳಗ್ಗೆ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಆಗಮಿಸಿದ ರಾಮಲಿಂಗಾ ರೆಡ್ಡಿ ದೇವೇ ಗೌಡರೊದನೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. 
ಸೆ.28ಕ್ಕೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಆದ್ದರಿಂದ, ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯ ಸಚಿವರಿಗೆ ಸೂಚಿಸಿದ್ದರೆನ್ನಲಾಗಿದೆ.
ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ. ಆದರೆ, ಈ ಬಾರಿ ಜೆಡಿಎಸ್ ಮೇಯರ್ ಪಟ್ಟಕ್ಕೆ ಪಟ್ಟು ಹಿ೯ಡಿದಿರುವ ಕಾರಣ ಈ  ಚುನಾವಣೆ ಕುತೂಹಲ ಮೂಡಿಸಿದೆ.
ಜೆಡಿ(ಎಸ್) ಶಾಸಕರು, ಬಿಬಿಎಂಪಿ ಸದಸ್ಯರ ಜೊತೆ ಭಾನುವಾರ ಸಭೆ ನಡೆಸಿದ್ದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, "ಬಿಬಿಎಂಪಿ ಕಾಂಗ್ಫ್ರೆಸ್-ಜೆಡಿ(ಎಸ್) ಮೈತ್ರಿ ಅಬಾಧಿತವಾದದ್ದೆಂದು ಕಾಂಗ್ರೆಸ್ ಭಾವಿಸಿದ್ದರೆ ಅದು ತಪ್ಪು" ಎನ್ನುವ ಮೂಲಕ ಬಿಬಿಎಂಪಿ ನಲ್ಲಿ ಕಾಂಗ್ರೆಸ್ ಒಡನಿರುವ ಮೈತ್ರಿ ಯಾವ ಕ್ಷಣದಲ್ಲಿಯೂ ಅಂತ್ಯ ಕಾಣಬಹುದು ಎಂದು ಸೂಚಿಸಿದ್ದರು.
ಇದೀಗ ರಾಮಲಿಂಗಾ ರೆಡ್ಡಿ ದೇವೇಗೌಡರನ್ನು ಭೇಟಿಯಾಗಿದ್ದು, ದೇವೇಗೌದರಿಗೆ ಜಾತ್ಯಾತೀತ ಶಕ್ತಿಗಳ ಬಗ್ಗೆ ವಿಶ್ವಾಸವಿದೆ. ಅವರು ಮೈತ್ರಿ ತೊರೆಯಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT