ಎಚ್ ಡಿ ದೇವೇಗೌಡ 
ರಾಜಕೀಯ

ನಾನು ಬದುಕಿರುವವರೆಗೆ ಕರ್ನಾಟಕ ಹಿಂದೂ ರಾಜ್ಯವಾಗಲು ಬಿಡಲ್ಲ: ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಹಿಂದೂ ದೇಶವನ್ನವಾಗಿ ಮಾಡಲು ಹೊರಟಿದ್ದಾರೆ. ಆದರೆ ನಾನು ಬದುಕಿರುವವರೆಗೆ ಕರ್ನಾಟಕವನ್ನ ಹಿಂದೂ ...

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಹಿಂದೂ ದೇಶವನ್ನವಾಗಿ ಮಾಡಲು ಹೊರಟಿದ್ದಾರೆ. ಆದರೆ ನಾನು ಬದುಕಿರುವವರೆಗೆ ಕರ್ನಾಟಕವನ್ನ ಹಿಂದೂ ರಾಜ್ಯವನ್ನಾಗಿ ಮಾಡಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಗುಡುಗಿದ್ದಾರೆ.
ಇಂದು ಕಲಬುರಗಿ ಜಿಲ್ಲೆಯ ಶಹಾಪುರದಲ್ಲಿ ಜೆಡಿಎಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ಜನತೆ ಸುಖ ಶಾಂತಿಯಿಂದ ನೆಮ್ಮದಿಯ ಬದುಕು ಸಾಗಿಸಲು ಬಿಡಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು ಎಂದು ಕರೆ ನೀಡಿದರು.
ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಕಾರವಾರದ ವ್ಯಕ್ತಿಯೊಬ್ಬರು ಇತ್ತೀಚೆಗೆ ಕನ್ನಡ ಖಾಸಗಿ ನ್ಯೂಸ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ದ್ವೇಷದ ಮಾತುಗಳನ್ನು ಹೇಳಿದ್ದಾರೆ. ಅಂದರೆ ಪ್ರಧಾನಿ ಮೋದಿ ಅವರು ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆಯೇ? ಎಂದು ಮಾಜಿ ಪ್ರಧಾನಿ ಪ್ರಶ್ನಿಸಿದರು.
ರಾಜ್ಯದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಒಬ್ಬರ ರೈತನೂ ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ. ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ