ಬಿಬಿಎಂಪಿಗೆ ಹೊಸ ಸಾರಥಿ: ಸಂಪತ್ ರಾಜ್ ಮೇಯರ್, ಪದ್ಮಾವತಿ ನರಸಿಂಹಮೂರ್ತಿ ಉಪ ಮೇಯರ್
ನಿರೀಕ್ಷೆಯಂತೆಯೇ ಬಿಬಿಎಂಪಿ ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ...
ಬೆಂಗಳೂರು: ನಿರೀಕ್ಷೆಯಂತೆಯೇ ಬಿಬಿಎಂಪಿ ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ. ಸಂಪತ್ ರಾಜ್ ಮೇಯರ್ ಆಗಿ ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಿಸಿದ್ದಾರೆ.
ಬಿಬಿಎಂಪಿಯ 51ನೇ ಮೇಯರ್ಆಗಿ ಸಂಪತ್ ರಾಜ್ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿಗೆ ಜಯವಾಗಿದೆ. ಈ ಮೂಲಕ ಅಧಿಕಾರದ ಕನಸು ಕಂಡಿದ್ದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. 139 ಮತ ಪಡೆದು ಸಂಪತ್ ರಾಜ್ ಆಯ್ಕೆಯಾಗಿದ್ದಾರೆ.
ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಮುಗಿದಿದ್ದು, ಕಾಂಗ್ರೆಸ್-ಜೆಡಿಎಸ್ಗೆಲುವು ಸಾಧಿಸಿದೆ ಉಪ ಮೇಯರ್ ಹುದ್ದೆ ಜೆಡಿಎಸ್ ಪಾಲಾಗಿದೆ. ಜೆಡಿಎಸ್ ನ ಪದ್ಮಾವತಿ ನರಸಿಂಹ ಮೂರ್ತಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಡಿ.ಜೆ.ಹಳ್ಳಿಯಿಂದ 2 ಬಾರಿ ಕಾರ್ಪೊರೇಟರ್ ಆಗಿರುವ ಸಂಪತ್ ರಾಜ್ಈ ಬಾರಿ ಬಿಬಿಎಂಪಿಯ ಮೇಯರ್ಆಗಿದ್ದಾರೆ. ಬಿಜೆಪಿ ಸಭಾತ್ಯಾಗ ಮಧ್ಯೆಯೇ ಚುನಾವಣಾಧಿಕಾರಿ ಜಯಂತಿಯವರು ಸಂಪತ್ ರಾಜ್'ರನ್ನು ನೂತನ ಮೇಯರ್ ಆಗಿ ಅಧಿಕೃತವಾಗಿ ಘೋಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.