ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ತಲೆಗೆ ಸಣ್ಣ ಗಾಯಗಳಿಂದ ಪಾರಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಲ್ಲಿನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದಾಗ ...

ಮೈಸೂರು: ಇಲ್ಲಿನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದಾಗ ಪ್ಲಾಸ್ಟಿಕ್ ಕುರ್ಚಿಯಿಂದ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಲೆಗೆ ಸ್ವಲ್ಪ ಏಟಾಗಿದೆ. ಕೂಡಲೇ ಅವರು ಸಹಜ ಸ್ಥಿತಿಗೆ ಬಂದು ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಿದರು.

ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿಯ ದರಿಪುರ, ಬರದನಾಪುರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ನಂತರ ನಿನ್ನೆ ಮಧ್ಯಾಹ್ನ ಮಾವಿನಹಳ್ಳಿಯಲ್ಲಿ ಪಕ್ಷದ ಮುಖಂಡರೊಬ್ಬರ ಮನೆಗೆ ಊಟಕ್ಕೆ ತೆರಳಿದ್ದರು. ಅವರು ಮಾಜಿ ಶಾಸಕ ಸತ್ಯನಾರಾಯಣ ಮತ್ತು ವಕೀಲ ಸ್ನೇಹಿತ ಮಾವಿನಹಳ್ಳಿ ಸಿದ್ದೇಗೌಡ ಜೊತೆಗೆ ಊಟಕ್ಕೆ ಕುಳಿತಿದ್ದರು. ಮುಖ್ಯಮಂತ್ರಿಯವರು ಕುಳಿತಿದ್ದ ಕುರ್ಚಿ ಆಯತಪ್ಪಿ ಕೆಳಗೆ ಬಿದ್ದಿತು. ಅದೃಷ್ಟವಶಾತ್ ಮುಖ್ಯಮಂತ್ರಿಯವರಿಗೆ ಗಾಯಗಳಾಗಲಿಲ್ಲ.

ತಕ್ಷಣವೇ ಭದ್ರತಾ ಸಿಬ್ಬಂದಿ ನೆರವಿಗೆ ಧಾವಿಸಿದರು. ಪಕ್ಷದ ಕಾರ್ಯಕರ್ತರಿಗೆ ಒಂದು ಬಾರಿ ಗಾಬರಿಯಾಯಿತು. ವೃತ್ತಿಯಲ್ಲಿ ವೈದ್ಯರಾಗಿರುವ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ಬಂದರು. ತಲೆಯಲ್ಲಿ ಸ್ವಲ್ಪ ಗಾಯವಾಗಿದೆಯಷ್ಟೆ ಎಂದು ಪರೀಕ್ಷಿಸಿ ಹೇಳಿದರು.

ಸ್ವಲ್ಪವೇ ಹೊತ್ತಿನಲ್ಲಿ ಮುಖ್ಯಮಂತ್ರಿಯವರು ಸುಧಾರಿಸಿಕೊಂಡರು. ಊಟ ಮುಗಿಸಿ ಮತ್ತೆ ಚುನಾವಣಾ ಪ್ರಚಾರ ಆರಂಭಿಸಿದರು. ನಂತರ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್