ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಸಿನಿಮಾ ಸ್ಟಾರ್ ಗಳು 
ರಾಜಕೀಯ

ಪ್ರಚಾರಕ್ಕೆ ಸ್ಟಾರ್ ಗಳ ಮೊರೆ ಹೋದ ರಾಜಕೀಯ ಪಕ್ಷಗಳು: ಅಖಾಡದಲ್ಲಿ ಘಟಾನುಘಟಿ ಕಲಾವಿದರು!

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪರವಾಗಿ ಹಲವು ಸಿನಿಮಾ ನಟ ನಟಿಯರು ಭಾಗವಹಿಸಲಿದ್ದಾರೆ.....

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪರವಾಗಿ ಹಲವು ಸಿನಿಮಾ ನಟ ನಟಿಯರು ಭಾಗವಹಿಸಲಿದ್ದಾರೆ.
ನಟ ಕಿಚ್ಚ ಸುದೀಪ್ ಹಾಗೂ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರವಾಗಿ ಜನರಲ್ಲಿ ಮತ ಕೇಳಲು ರೆಡಿಯಾಗಿದ್ದಾರೆ.ಇನ್ನೂ ತಾವೇನು ಕಡಿಮೆ ಇಲ್ಲ ಎಂಬಂತೆ ಬಿಜೆಪಿ ಬಾಲಿವುಡ್ ನಟಿ ಹೇಮಮಾಲಿನಿ ಹಾಗೂ ನವರಸ ನಾಯಕ ಜಗ್ಗೇಶ್ ಅವರನ್ನು ಪ್ರಚಾರಕ್ಕೆ ಕರೆ ತರಲು ಸಿದ್ದತೆ ನಡೆಸಿದೆ. ಕಾಂಗ್ರೆಸ್ ಕೂಡ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರನ್ನು ಬಳಸಿಕೊಳ್ಳಲಿದೆ,
ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೋಳ್ಳುವಂತೆ ನಟ ಸುದೀಪ್ ಅವರಿಗೆ  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಚೆಂಡು ಈಗ ಸುದೀಪ್ ಅಂಗಳದಲ್ಲಿದೆ. ಇತ್ತೀಚೆಗೆ ನಟ ಸುದೀಪ್ ಕುಮಾರ ಸ್ವಾಮಿ ಅವರ ಮನೆಗೆ ಭೇಟಿ ನೀಡಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿತ್ತು.
ಕುಮಾರ ಸ್ವಾಮಿ ಅವರ ಮನವಿ ಮೇರೆಗೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರ ಪ್ರಚಾರ ದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಬಳ್ಳಾರಿ ಮತ್ತು ರಾಯಚೂರುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಲುಗು ಮಾತನಾಡುವ ಜನರಿದ್ದ, ಅಲ್ಲೆಲ್ಲಾ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಚಾರದ ವೇಳೆ ಪಟ್ಟಿ ತಯಾರಿಸಲಾಗುವುದು ಎಂದು ಅವರು ಹೇಳಿದ್ದಾರೆ,
ಇನ್ನೂ ಕಾಂಗ್ರೆಸ್ ಕೂಡ ಸ್ಯಾಂಡಲ್ ವುಡ್ ನಟಿ ರಮ್ಯಾ ಅವರನ್ನು ಪ್ರಚಾರ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಿದೆ. ಸದ್ಯ ರಮ್ಯ ಎಐಸಿಸಿ ಸಾಮಾಜಿಕ ಮಾಧ್ಯಮ ಘಟಕದ ಮುಖ್ಯಸ್ಥೆಯಾಗಿದ್ದಾರೆ, ರಮ್ಯಾ ಜೊತೆಗೆ ಅಂಬರೀಶ್, ಮಾಲಾಶ್ರೀ, ಅಭಿನಯ, ಭಾವನಾ ಜಯಮಾಲಾ ಕೂಡ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯದರ್ಶಿ ಮಿಲಿಂದ್ ಧರ್ಮಸೇನಾ ತಿಳಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ನಟ ಪ್ರಕಾಶ್ ರಾಜ್ ಅವರನ್ನು ಪ್ರಚಾರಕ್ಕೆ ಕರೆ ತರಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದೆ.
ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವಲ್ಲಿ ಬಿಜೆಪಿ ಕೂಡ ಹಿಂದೆ ಬಿದ್ದಿಲ್ಲ, ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ ಮೆಗಾ ಸ್ಟಾರ್ ಆಗಿರಲಿದ್ದಾರೆ, ಇವರ ಜೊತೆಗೆ ನಟ ಜಗ್ಗೇಶ್,  ತಾರಾ ಅನುರಾಧ, ಶೃತಿ, ಮಾಳವಿಕಾ ಅವಿನಾಶ್ ಹಾಗೂ ಬಾಲಿವುಡ್ ಡ್ರೀಮ್ ಗರ್ಲ್ ಹೇಮಾ ಮಾಲಿನಿ ಕೂಡ ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT