ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಬಲ ಸವಾಲೊಡ್ಡಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ಪಕ್ಷದ 25 ಸ್ಥಳೀಯ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ.
ಮಾಜಿ ಶಾಸಕ ಕೆಂಪಈರೇಗೌಡ ಪುತ್ರ ಉಮಾಶಂಕರ್ ಬೆಂಬಲಿಗರ ಜೊತೆ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದು ಕಾಂಗ್ರೆಸ್ ಗೆ ಹಿನ್ನಡೆಯುಂಟಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿರುವ ಹೆಚ್ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ 2008 ರಲ್ಲಿ ವರುಣಾ ವಿಧಾನಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಚಾಮುಂಡೇಶ್ವರಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸದ ಸಿಎಂ ಸಿದ್ದರಾಮಯ್ಯ ಈಗ ತಮ್ಮ ಮಗ ಯತೀಂದ್ರಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕಾಗಿ ತಾವು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದಾರೆಯೇ ಹೊರತು ಕ್ಷೇತ್ರದ ಜನತೆಯ ಮೇಲಿನ ಪ್ರೀತಿಯಿಂದಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಶಿಷ್ಟಾಚಾರ ಉಲ್ಲಂಘನೆಯ ಆರೋಪವನ್ನೂ ಕುಮಾರಸ್ವಾಮಿ ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ಪುತ್ರ ಯತೀಂದ್ರ ಅವರಿಂದ ಉದ್ಘಾಟಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics