ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ರೋಡ್ ಶೋ
ದಾವಣಗೆರೆ: ಶಿವಮೊಗ್ಗದಲ್ಲಿ ಮಂಗಳವಾರ ತಾವು ನಡೆಸಿದ ರೋಡ್ ಶೋ ಮತ್ತು ಇತರ ಚುನಾವಣಾ ಪ್ರಚಾರ ಕಾರ್ಯಕ್ರಮಗಳಿಗೆ ನಿರೀಕ್ಷಿಸಿದಷ್ಟು ಜನ ಸೇರಿಲ್ಲವೇಕೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ದಾವಣಗೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ.
ಇಂದು ಬಾಪೂಜಿ ಅತಿಥಿ ಗೃಹದಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಗುಪ್ತ ಸಭೆ ನಡೆಸಿದ ರಾಹುಲ್ ಗಾಂಧಿ, ರ‍್ಯಾಲಿಗೆ ಜನರು ಸೇರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ಜಿಲ್ಲೆಯಾದ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಭೆಗೆ ನಿರೀಕ್ಷಿಸಿದಷ್ಟು ಜನ ಸೇರಿಲ್ಲ ಏಕೆ ಎಂದು ಪ್ರಶ್ನಿಸಿದರು.
ರಾಹುಲ್ ಅವರ ಪ್ರಶ್ನೆಗೆ ಬಿಸಿಲು ಜೋರಾಗಿರುವ ಕಾರಣ ಜನ ಸೇರಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೇರಿ ಹಲವು ನಾಯಕರು ಕಾರಣ ನೀಡಿದ್ದಾರೆ. ಬಿಸಿಲು ನಿಮ್ಮೂರಲ್ಲಿ ಮಾತ್ರ ಇರುವುದೇ? ಇಡೀ ದೇಶದಲ್ಲೇ ಇದೆ. ಪಕ್ಷ ಸಂಘಟನೆಗೆ ಒತ್ತು ನೀಡಿ. ಸರ್ಕಾರದ ಸಾಧನೆ, ಮಂತ್ರಿಗಳ ಕೆಲಸದ ಬಗ್ಗೆ ಹೇಳಬೇಡಿ. ಗೆಲ್ಲುವುದಕ್ಕೆ ಯಾವ ಸಮಸ್ಯೆಗಳಿವೆ ಎಂಬುದನ್ನು ತಿಳಿಸಿ ಎಂದು ರಾಹುಲ್ ಸೂಚಿಸಿದ್ದಾರೆ.