ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ, ದೂರು ದಾಖಲು 
ರಾಜಕೀಯ

ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ, ದೂರು ದಾಖಲು

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮನೆ ಎದುರು ದುಷ್ಕರ್ಮಿಗಳು ವಾಮಾಚಾರ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಸಂಗ ನಡೆದಿದೆ.

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮನೆ ಎದುರು ದುಷ್ಕರ್ಮಿಗಳು ವಾಮಾಚಾರ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಸಂಗ ನಡೆದಿದೆ. 
ಚುನಾವಣೆ ಕಣದಿಂಡ ತಮ್ಮ ಎದುರಾಳಿ ಅಭ್ಯರ್ಥಿಯನ್ನು ದೂರ ಮಾಡಲು ಈ ಕೃತ್ಯ ಎಸಗಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್ ಆರೋಪಿಸಿದ್ದಾರೆ.
ವಾಮಾಚಾರ ನಡೆಸಿರುವ ದುಷ್ಕರ್ಮಿಗಳು ಗೌರಿಶಂಕರ್ ಅವರ ಬೆಂಗಳೂರಿನ ನಾಗರಬಾವಿಯಲ್ಲಿರುವ ಮಎಯ ಎದುರಿಗೆ ಒಂದು ಅಡಕೆ ತಟ್ಟೆಯಲ್ಲಿ ಕುಂಕುಮ ಮಿಶ್ರಿತ ಅನ್ನ ಇಟ್ಟು ಅದರಲ್ಲಿ ಬೆದರಿಕೆ ಪತ್ರ ಹಾಗೂ ಒಂದು ಚಾಕು ಇರಿಸಿದ್ದಾರೆ.
"ನೀನು ಚುನಾವಣೆಗೆ ನಾಮಪತ್ರ ಸಲ್ಲಿಸಬಾರದು, ಸಲ್ಲಿಸಿದ್ದಾದರೆ ನಿನ್ನ ಹೆಂಡತಿ, ಮಕ್ಕಳನ್ನು ಸುಮ್ಮನೆ ಬಿಡುವುದಿಲ್ಲ. ನಿನ್ನನ್ನು ಬೀದಿಯಲ್ಲಿ ಭಿಕ್ಷೆ ಎತ್ತುವಂತೆ ಮಾಡುತ್ತೇವೆ" ಪತ್ರದಲ್ಲಿ ಬರೆಯಲಾಗಿದೆ.
ಮಾಜಿ ಸಚಿವ ಚೆನ್ನಿಗಪ್ಪ ಅವರ ಪುತ್ರ ಗೌರಿಶಂಕರ್​ ಅವರಿಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಖಚಿತಗೊಂಡಿದೆ. ಇದೇ ಕಾರಣದಿಂದ ಅವರನ್ನು ಬೆದರಿಸಲಿಕ್ಕಾಗಿ ಎದುರಾಳಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಪ್ರಸ್ತುತ ಗೌರಿಶಂಕರ್ ಪ್ರಕರಣದ ಬಗೆಗೆ ಬೆಂಗಳೂರಿನ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸ್ದಾರೆ. ದೂರಿನಲ್ಲಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರ ಕುರಿತಂತೆ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT