ಸಿಎಂ ಸಿದ್ದರಾಮಯ್ಯ 
ರಾಜಕೀಯ

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ:ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ....

ಬೆಂಗಳೂರು; ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪಕ್ಷದ ಮುಖಂಡರು ಮೈಸೂರಿನ ಚಾಮುಂಡಿ ಮಾತ್ರವಲ್ಲದೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ನೀಡಿರುವ ಆಹ್ವಾನವನ್ನು ಇನ್ನೂ ಪರಿಗಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಬಾದಾಮಿ ಅಥವಾ ಬೇರೆ ಇನ್ನಾವುದೋ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಆಹ್ವಾನ ನೀಡಿರುವುದು ನಿಜ. ಆದರೆ ನಾನಿನ್ನೂ ಆ ಬಗ್ಗೆ ನಿರ್ಧರಿಸಿಲ್ಲ ಎಂದರು.

ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಆರಿಸಿ ಬರುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು,
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೈಜೋಡಿಸಿದ್ದಾರೆ ಎನಿಸುತ್ತದೆ. 2006ರಲ್ಲಿ ಅವರು ಮೈತ್ರಿ ಮಾಡಿಕೊಂಡಿದ್ದರು. ಆದರೆ ಚುನಾವಣೆಯಲ್ಲಿ ಯಾರು ಗೆದ್ದರು? ಈಗಲೂ ಕೂಡ ಕುಮಾರಸ್ವಾಮಿ ಮತ್ತು ಯಡಿಯೂರಪ್ಪನವರು ಒಂದಾಗಿದ್ದಾರೆ. ಆದರೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ ಎಂದರು.

ಚುನಾವಣೆಗೆ ಅಧಿಕೃತ ಯಂತ್ರೋಪಕರಣಗಳನ್ನು ಬಳಸುತ್ತಿರುವುದಾಗಿ ತಮ್ಮ ಮೇಲೆ ಕೇಳಿಬರುತ್ತಿರುವ ಆರೋಪಗಳನ್ನು ತಳ್ಳಿಹಾಕಿದ ಸಿದ್ದರಾಮಯ್ಯ, ಈ ಹಿಂದೆ ಕೂಡ ಆ ರೀತಿ ಮಾಡಿಲ್ಲ, ಇನ್ನು ಮುಂದಿನ ಚುನಾವಣೆಗಳಲ್ಲಿ ಕೂಡ ಆ ರೀತಿ ಮಾಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT