ಮಾತೆ ಮಹಾದೇವಿ 
ರಾಜಕೀಯ

ಕಾಂಗ್ರೆಸ್ ಗೆ ಮತ ನೀಡಿ: ಲಿಂಗಾಯತರಿಗೆ ಮಾತೆ ಮಹಾದೇವಿ ಕರೆ

ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮತ ನೀಡುವಂತೆ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ.....

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮತ ನೀಡುವಂತೆ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಶನಿವಾರ ಬಹಿರಂಗವಾಗಿಯೇ ಲಿಂಗಾಯತರಿಗೆ ಕರೆ ನೀಡಿದ್ದಾರೆ.
ಚಾಲುಕ್ಯ ವೃತ್ತದ ಬಳಿ ಇರುವ ಬಸವ ಮಂಟಪದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಎಲ್ಲಾ ಲಿಂಗಾಯತರು ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎಂದು ಮಾತೆ ಮಹಾದೇವಿ ಮನವಿ ಮಾಡಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮೌನ ನಮಗೆ ಯಾವುದೇ ಬೆಂಬಲ ನೀಡಲಿಲ್ಲ. ಇನ್ನು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಲಿಂಗಾಯತ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗಳಲ್ಲಿ ಗೊಂದಲವಿದೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ. ಅಲ್ಲದ ಅಮಿತ್ ಶಾ ಅವರೇ ನೀವು ಜೈನ ಧರ್ಮದವರು , ಭಾರತದ ಐಕ್ಯತೆಗೆ ಭಂಗ ತಂದಿದ್ದೀರಾ? ದೇಶ ಒಡೆದಿದ್ದೀರಾ? ಬೌದ್ಧ ಧರ್ಮವು ಹಿಂದೂ ಧರ್ಮ ಮತ್ತು ದೇಶವನ್ನು ಒಡೆದಿದೆಯೇ? ಎಂದು ಪ್ರಶ್ನಿಸಿದ್ದು, ಲಿಂಗಾಯತ ಹಿಂದೂ ಧರ್ಮ ವಿರೋಧಿಯಲ್ಲ, ಅದಕ್ಕಿಂತ ಭಿನ್ನ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT