ರಾಜಕೀಯ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐ ಆರ್

Shilpa D
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ವಿರುದ್ಧ ಶನಿವಾರ ಎಫ್‍ಐಆರ್ ದಾಖಲಾಗಿದೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಪುರುಷರ ವೇಟ್‌ಲಿಫ್ಟಿಂಗ್‌ನ 56 ಕೆ.ಜಿ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರ ಸಮೀಪದ ಗುರುರಾಜ್‌ ಪೂಜಾರಿ ಅವರಿಗೆ, ಕ್ರೀಡಾ ನೀತಿಯ ಅನ್ವಯ 25 ಲಕ್ಷ ನಗದು ಹಾಗೂ ಸರ್ಕಾರಿ ‘ಬಿ‘ ಗ್ರೂಪ್‌ ಹುದ್ದೆ ಸಿಗಲಿದೆ ಎಂದು ಅವರು ಹೇಳಿಕೆ ನೀಡಿದ್ದರು.
ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆಯಿಂದ ಮತದಾರರನ್ನು ಓಲೈಸಿದಂತಾಗುತ್ತದೆ, ಆಮಿಷ ಒಡ್ಡಿದಂತಾಗುತ್ತದೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ಉಡುಪಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.
ಕ್ರೀಡಾ ನೀತಿಯ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಾಗಿ ಮತದಾನ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಮತದಾರರನ್ನು ಓಲೈಸುವಂತಾಗುತ್ತದೆ ಅಲ್ಲದೇ ಆಮಿಷ ಒಡ್ಡುವಂತಾಗುತ್ತದೆ, ಇದು ನೀತಿ ಸಂಹಿತೆಗೆ ವಿರೋಧವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
SCROLL FOR NEXT