ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯತೀಂದ್ರ ಮಾಜಿ ಐಪಿಎಸ್ ಅಧಿಕಾರಿ ರೇವಣಸಿದ್ದಯ್ಯರನ್ನು ಭೇಟಿ ಮಾಡಿದರು. 
ರಾಜಕೀಯ

ವಿಜಯೇಂದ್ರ ನಂತರ ಮಾಜಿ ಐಪಿಎಸ್ ಅಧಿಕಾರಿಯನ್ನು ಭೇಟಿ ಮಾಡಿದ ಯತೀಂದ್ರ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಹಲವು ವಿಷಯಗಳಿಗೆ ಗಮನ ಸೆಳೆಯಲಿದೆ...

ಮೈಸೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಹಲವು ವಿಷಯಗಳಿಗೆ ಗಮನ ಸೆಳೆಯಲಿದೆ. ನಿನ್ನೆ ಮತ್ತೊಂದು ಪ್ರಮುಖ ಬೆಳವಣಿಗೆ ಇಲ್ಲಿ ಕಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾಜಿ ಐಪಿಎಸ್ ಅಧಿಕಾರಿ ಎಲ್. ರೇವಣಸಿದ್ದಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಮೊನ್ನೆ ಭಾನುವಾರ ಮೈಸೂರು ಹೊರವಲಯದ ನಂಜನಗೂಡು ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಮಾಜಿ ಪೊಲೀಸ್ ಅಧಿಕಾರಿ ಎಲ್.ರೇವಣಸಿದ್ದಯ್ಯನವರನ್ನು ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಭೇಟಿ ಮಾಡಿದ್ದರು.

ಬೆಳಗಿನ ಉಪಹಾರದ ವೇಳೆ ಸುಮಾರು 20 ನಿಮಿಷಗಳ ಕಾಲ ಯತೀಂದ್ರ ರೇವಣಸಿದ್ದಯ್ಯನವರ ಜೊತೆ ಮಾತುಕತೆ ನಡೆಸಿದ್ದು ಯಾವುದೇ ಮಹತ್ವದ ಮಾತುಕತೆ ನಡೆಯಲಿಲ್ಲ ಎಂದು ಸ್ವತಃ ಯತೀಂದ್ರ ತಿಳಿಸಿದ್ದಾರೆ. ನನ್ನ ತಂದೆಯ ಸಲಹೆ ಮೇರೆಗೆ ನಾನು ಇವರನ್ನು ಭೇಟಿ ಮಾಡಲು ಬಂದೆ. ದೆಹಲಿಯಿಂದ ಮರಳಿದ ನಂತರ ನನ್ನ ತಂದೆ ಇವರನ್ನು ಭೇಟಿ ಮಾಡಲಿದ್ದಾರೆ ಎಂದು ಯತೀಂದ್ರ ನಂತರ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರೇವಣಸಿದ್ದಯ್ಯ ಹಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಬಿಜೆಪಿಯಿಂದ ರೇವಣಸಿದ್ದಯ್ಯನವರಿಗೆ ಹೆಚ್ಚು ಓಲೈಕೆಗಳು ಬರುತ್ತಿರುವುದರಿಂದ ಕಾಂಗ್ರೆಸ್ ನಲ್ಲಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಇತ್ತೀಚೆಗೆ ಕಾಂಗ್ರೆಸ್ ನ ಯಾವುದೇ ಸಮಾವೇಶಗಳಲ್ಲಿ ಕೂಡ ಅವರು ಕಾಣಿಸಿಕೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯತೀಂದ್ರ ಭೇಟಿ ರೇವಣಸಿದ್ದಯ್ಯನವರ ಓಲೈಕೆಗೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರೇವಣಸಿದ್ದಯ್ಯ, ರಾಜಕೀಯಕ್ಕೆ ಯುವಕರು ಬರುತ್ತಿರುವುದು ಸಂತೋಷವಾಗುತ್ತಿದೆ. ಚುನಾವಣೆಯಲ್ಲಿ ನನ್ನ ಬೆಂಬಲ ಕೋರಿದ ಯತೀಂದ್ರಗೆ ನಾನು ಶುಭ ಹಾರೈಸಿದೆ. ಸಿದ್ದರಾಮಯ್ಯನವರನ್ನು ನನ್ನನ್ನು ಭೇಟಿ ಮಾಡುವುದರಲ್ಲಿ ಏನೂ ತಪ್ಪಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT