ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ , ದುರಾಡಳಿತ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಎರಡನೇ ಚಾರ್ಜ್ ಶೀಟ್ ನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ದುರಾಡಳಿತ ಅಧಿಕಾರದ ದುರುಪಯೋಗ ಹಾಗೂ ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಹೆಸರಿನಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಪ್ರಕಾಶ್ ಜಾವಡೇಕರ್, ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ, ಸಚಿವ ಡಿ. ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ, ಹಾಸಿಗೆ-ದಿಂಬು ಹಗರಣ, ವಕ್ಫ್ ಆಸ್ತಿ ಕಬಳಿಕೆ, ಡೈರಿ ಹಗರಣ ಸೇರಿ ಸಾಕಷ್ಟು ಹಗರಣ ನಡೆದಿವೆ. ಯುಪಿಎ 10 ವರ್ಷದಲ್ಲಿ ನಡೆಸಿದ ಸರಣಿ ಹಗರಣಗಳ ಮಾದರಿಯಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವೂ ಭಾರೀ ಅಕ್ರಮದಲ್ಲಿ ತೊಡಗಿದೆ ಎಂದು ಹೇಳಿದರು.
ನಾಲಾ ನಿರ್ಮಾಣ , ಅಭಿವೃದ್ಧಿ ಸಂಬಂಧ 157 ಕೋಟಿ ರೂ. ಮೊತ್ತದ ಕಾಮಗಾರಿಯ ಟೆಂಡರ್ ನಲ್ಲಿ ಅಕ್ರಮದ ಬಗ್ಗೆ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ನಡೆಸುವ ಬಗ್ಗೆ ಮಾಹಿತಿ ಪಡೆದು ಎರಡು ದಿನ ಮೊದಲೇ ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.