ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿನ ಬಿಜೆಪಿ ಮುಖಂಡರು 
ರಾಜಕೀಯ

ನೀತಿ ಸಂಹಿತೆ ಹೆಸರಿನಲ್ಲಿ ಚುನಾವಣಾಧಿಕಾರಿಗಳಿಂದ ತೊಂದರೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನೀತಿ ಸಂಹಿತೆ ಹೆಸರಿನಲ್ಲಿ ಚುನಾವಣಾಧಿಕಾರಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದಾರೆ.

ಬೆಂಗಳೂರು: ನೀತಿ ಸಂಹಿತೆ ಹೆಸರಿನಲ್ಲಿ ಚುನಾವಣಾಧಿಕಾರಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ  ಬಿಜೆಪಿ ಮುಖಂಡರು ಚುನಾವಣಾ ಆಯೋಗಕ್ಕೆ  ಇಂದು  ದೂರು ನೀಡಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿನ ಮುಖಂಡರು   ಚುನಾವಣಾ ಆಯುಕ್ತರನ್ನು ಭೇಟಿಮಾಡಿ  'ನಮ್ಮ ಕಾರ್ಯಕರ್ತರು ಮನೆಗಳ ಮೇಲೆ ಹಾಕಿಕೊಂಡಿದ್ದ ಓಂ ಗುರುತು ಇರುವ ಬಾವುಟಗಳನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ' ಎಂದು ದೂರಿದರು.

"ಹಾಗೆಯೇ, ತಮ್ಮ ತಮ್ಮ ಮನೆಗಳ ಗೋಡೆ ಮೇಲೆ ಬರೆದಿರುವಂತಹ 'ಕಮಲ' ದ ಚಿಹ್ನೆ ಹಾಗೂ ಬರಹಗಳನ್ನು ಅಳಿಸುವಂತೆಯೂ ತಾಕೀತು ಮಾಡುತ್ತಿದ್ದಾರೆ. ಇವೆಲ್ಲ ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ.

ಸಚಿವ ಅನಂತ್‌ ಕುಮಾರ್, ಸಂಸದ ಪಿ.ಸಿ. ಮೋಹನ್‌, ಶಾಸಕ ಆರ್.ಆಶೋಕ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ